ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ವಸ್ತುಗಳ ಅಕ್ರಮ ದಂಧೆಯನ್ನು ತಡೆಯಲು ವಿಶೇಷ ಪೊಲೀಸ್ ಆಯುಕ್ತಾಲಯವನ್ನು ಸ್ಥಾಪಿಸುವಂತೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮಾದಕ ವಸ್ತುಗಳ ಮಾರಾಟ ಇಡೀ ದೇಶದಲ್ಲಿ ವ್ಯಾಪಕವಾಗಿದ್ದು, ಸಾಮಾಜಿಕ ಪಿಡುಗು ಆಗುವುದರ ಜೊತೆಗೆ ಯುವ ಜನಾಂಗಕ್ಕೆ ಮಾರಕವಾಗಿ ವ್ಯಾಪಿಸಿರುತ್ತದೆ. ಮಾದಕ ವಸ್ತುಗಳ ಅಕ್ರಮ ದಂದೆಯು ದಿನೇ ದಿನೇ ಹೆಚ್ಚಾಗುತ್ತಿದೆ ಎಂದಿದ್ದಾರೆ.
ಕಾನೂನು ಬಾಹಿರವಾಗಿ ವಿದೇಶಿ ಸಿಗರೇಟ್ ಮಾರಾಟ, ಅಕ್ರಮ ಸಿಲಿಂಡರ್ ರಿಫಿಲ್ಲಿಂಗ್ ಹಾಗೂ ಇಸ್ಪೀಟ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಲಕ್ಷಾಂತರ ರೂ. ನಗದು ಹಾಗೂ ಸಿಗರೇಟ್, ಸಿಲಿಂಡರ್ ಗಳನ್ನು ವಶಕ್ಕೆ ಪಡೆದುಕೊಂಡಿದೆ.
ವಿದೇಶಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಭಾರತ ಮೂಲದ ಪರಸ್ಮಲ್(40) ಮತ್ತು ಮೊಂಟುಸಿಂಗ್(45) ಬಂಧಿತರು. ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ ವಿದೇಶಿ ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದೆ.


