ತುಮಕೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲ್ಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರ ಹಿತದೃಷ್ಠಿಯಿಂದ ಶೇಂಗಾ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಖರೀದಿ ಕೇಂದ್ರಗಳನ್ನು ಆಯಾ ತಾಲ್ಲೂಕುನ ಎಪಿಎಂಸಿ ಆವರಣದಲ್ಲಿ ತೆರೆಯಬೇಕು. ಶೇಂಗಾ ಖರೀದಿಗಾಗಿ ಕೇಂದ್ರ ಸರ್ಕಾರದ ನಫೆಡ್ ಮತ್ತು ರಾಜ್ಯ ಸರ್ಕಾರದ ಕೆ.ಓ.ಎಫ್.ಅನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಎಫ್.ಎ.ಕ್ಯೂ ನಿಯಾಮಾನುಸಾರ ಪ್ರತಿ ಎಕರೆಗೆ ಒಬ್ಬ ರೈತನಿಂದ 3 ಕ್ವಿಂಟಾಲ್ನAತೆ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಬೀಜವನ್ನು ಖರೀದಿಸಬೇಕು. ಪ್ರತಿ ಕ್ವಿಂಟಾಲ್ ಶೇಂಗಾ ಬೀಜಕ್ಕೆ 6,783 ರೂ.ಗಳ ಬೆಂಬಲ ಬೆಲೆಯನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.
ಶೇಂಗಾ ಖರೀದಿ ಕೇಂದ್ರಗಳಲ್ಲಿ ನವೆಂಬರ್ 4 ರಿಂದ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ರೈತರಿಂದ ಶೇಂಗಾ ಖರೀದಿಸುವ ಪೂರ್ವದಲ್ಲಿ ಫ್ರೂಟ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ನೋಂದಾಯಿಸಿದ ನಂತರ 90 ದಿನಗಳವರೆಗೆ ಖರೀದಿ ಮಾಡಬೇಕು. ರೈತರ ನೋಂದಣಿಗೆ 45 ದಿನಗಳ ಕಾಲಾವಕಾಶವಿದ್ದು, ಯಾವುದೇ ಗದ್ದಲ–ಗಲಭೆಗಳಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿಗೆ ಸೂಚನೆ ನೀಡಿದರು.
ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸುಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪ ನಿದೇರ್ಶಕ ಡಾ: ಬಿ.ರಾಜಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296