nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ

    May 1, 2026

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026
    Facebook Twitter Instagram
    ಟ್ರೆಂಡಿಂಗ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    • ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ
    • ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 28, 2023

    ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminOctober 28, 2023No Comments2 Mins Read
    siddharamayya 2

    ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.


    Provided by
    Provided by

    ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ  ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಕೋಟಿ ಅನುದಾನ ಮೀಸಲಿಡಲಾಗುತ್ತಿತ್ತು. ಆದರೆ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರ ಕೋಟಿಯಿಂದ  30 ಸಾವಿರ ಕೋಟಿಗೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

    ಎಸ್ ಸಿ ಎಸ್ ಟಿ ಜನರಿಗೆ ಅನುದಾನ ರಾಜ್ಯಾಂಗಬದ್ಧ: ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ ಸಿ ಹಾಗೂ ಶೇ.7 ರಷ್ಟು ಎಸ್ ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ ಸಿ ಹಾಗೂ ಎಸ್ ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗನುಗುಣವಾಗಿ ಎಸ್ ಸಿ ಎಸ್ ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. ಯಾವುದೇ ಸರ್ಕಾರಗಳು ಬಂದರೂ ಈ ಕಾನೂನನ್ನು ಯಾರು ಬದಲಾಯಿಸಲು ಸಾಧ್ಯವಿಲ್ಲ. ಈ ಕಾನೂನು ನಂತರ 2013 ರಿಂದ 2018ರವರೆಗೆ ನಮ್ಮ ಸರ್ಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ಟಿ ಜನರಿಗೆ ಮೀಸಲಿಡಲಾಗಿತ್ತು.  ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗಬದ್ಧವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

    ಪ್ರಶಸ್ತಿ ವಿಜೇತರ ಸಾಧನೆಗಳು ಸ್ಪೂರ್ತಿಯಾಗಲಿ: ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳನ್ನು ಮುಖ್ಯಮಂತ್ರಿಯವರು ಕೋರಿದರು. ಈ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರಶಸ್ತಿ ಪುರಸ್ಕøತರ ಸಾಧನೆಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು.

    ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ   ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ ಸ್ವಾಮೀಜಿ , ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ,  ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜೋ ಸಂಸದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    ನಿಟ್ಟೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಪತ್ರೆಮತ್ತಿಘಟ್ಟದಲ್ಲಿ ಮೇ 3 ಮತ್ತು 4 ರಂದು ಶ್ರೀ ಜೋಡಿಬಸವೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ…

    ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ

    May 1, 2026

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.