ಇಂದು, ಪ್ರಪಂಚದಾದ್ಯಂತದ ಕ್ರೈಸ್ತರು ಕ್ರಿಸ್ತನ ಕೊನೆಯ ಭೋಜನದ ನೆನಪಿಗಾಗಿ ಈಸ್ಟರ್ ಗುರುವಾರವನ್ನು ಆಚರಿಸುತ್ತಾರೆ. ವಿನಯಕ್ಕೆ ನಿದರ್ಶನವಾದ ಕ್ರಿಸ್ತನು ತನ್ನ ಶಿಷ್ಯರ ಪಾದಗಳನ್ನು ತೊಳೆದ ತ್ಯಾಗದ ನೆನಪಿಗಾಗಿ ಇಂದು ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಕಾಲು ತೊಳೆಯುವ ಸೇವೆ ನಡೆಯಲಿದೆ.
ಕೊನೆಯ ಭೋಜನದ ನೆನಪಿಗಾಗಿ ಚರ್ಚ್ಗಳು ಮತ್ತು ಮನೆಗಳಲ್ಲಿ ಸಂಜೆ ಬ್ರೆಡ್-ಬ್ರೇಕಿಂಗ್ ಸಮಾರಂಭವಿರುತ್ತದೆ. ಚರ್ಚ್ ಮುಖಂಡರು ವಿವಿಧ ದೇವಾಲಯಗಳಲ್ಲಿ ಸಮಾರಂಭಗಳ ಅಧ್ಯಕ್ಷತೆ ವಹಿಸುವರು.
ಯೇಸು ಕ್ರಿಸ್ತ ತನ್ನ ಶಿಷ್ಯರ ಪಾದಗಳನ್ನು ತೊಳೆದು ಪ್ರಭು ಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ, ” ಎಂದರು.
ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ” ಈ ಪಾತ್ರ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ, ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ, ” ಎಂದರು. ಇಂದೇ ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.
ವರದಿ : ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


