ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಐಟಿಟಿಎಫ್-ಎಟಿಟಿಯು ಏಷ್ಯನ್ ಕಪ್ ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಇತಿಹಾಸ ಬರೆದಿದ್ದಾರೆ.
ಕಂಚಿನ ಪದಕಕ್ಕಾಗಿ ಶನಿವಾರ ನಡೆದ ವನಿತೆಯರ ಸಿಂಗಲ್ಸ್ ಪಂದ್ಯದಲ್ಲಿ ಮಾಣಿಕ್ ಬಾತ್ರಾ 4-2 (11-6, 6-11, 11-7, 12-10, 4-11, 11-2) ವಿಶ್ವದ 6ನೇ ಶ್ರೇಯಾಂಕಿತೆ ಹಾಗೂ ಮೂರು ಬಾರಿಯ ಏಷ್ಯನ್ ಚಾಂಪಿಯನ್ ಹೀನಾ ಹಯಾತ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದರು.
ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮಾಣಿಕಾ ಬಾತ್ರಾ 4-2 ಸೆಟ್ ಗಳಿಂದ ಮಿಮಾ ವಿರುದ್ಧ ಆಘಾತ ಅನುಭವಿಸಿ ಫೈನಲ್ ಪ್ರವೇಶಿಸುವ ಅವಕಾಶದಿಂದ ವಂಚಿತರಾದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy