nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ: ಶಿರಾ ವಿಧಾನಸಭಾ ಕ್ಷೇತ್ರದ ಹಳ್ಳಿ ಗಳಿಗೆ ಕುಡಿಯುವ ನೀರು ಒದಗಿಸಲು ವಿಸ್ತೃತ ಯೋಜನಾ ವರದಿ ತಯಾರಿ ಸಭೆ
    ರಾಜ್ಯ ಸುದ್ದಿ October 18, 2023

    ಎತ್ತಿನಹೊಳೆ: ಶಿರಾ ವಿಧಾನಸಭಾ ಕ್ಷೇತ್ರದ ಹಳ್ಳಿ ಗಳಿಗೆ ಕುಡಿಯುವ ನೀರು ಒದಗಿಸಲು ವಿಸ್ತೃತ ಯೋಜನಾ ವರದಿ ತಯಾರಿ ಸಭೆ

    By adminOctober 18, 2023No Comments2 Mins Read
    tb jayachandra

    ಬೆಂಗಳೂರು: ಎತ್ತಿನಹೊಳೆ ಯೋಜನೆ ಮೂಲಕ ಕುಡಿಯುವ ನೀರಿಗಾಗಿ ಶಿರಾ  ವಿಧಾನಸಭಾ ಕ್ಷೇತ್ರದ ಕೆರೆಗಳನ್ನು ತುಂಬಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು .

    ಸಣ್ಣ  ನೀರಾವರಿ ಇಲಾಖೆಯ ಇಂಜಿನಿಯರ್ ಗಳಾದ ಸಂಜೀವ್ ರಾಜು, ಮೂಡಲ ಗಿರಿಯಪ್ಪ ಪ್ರಭಾಕರ್ ಸೇರಿದಂತೆ ಹಲವಾರು ಇಂಜಿನಿಯರ್ ಗಳು ಸಭೆಯಲ್ಲಿ ಭಾಗವಹಿಸಿದ್ದರು‌. EA Technologies  ಮುಖ್ಯಸ್ಥ ರಂಗನಾಥ್ ಅವರು ಸಹ ಸಭೆಯಲ್ಲಿ ಭಾಗವಹಿಸಿದ್ದರು.


    Provided by
    Provided by

    ಎತ್ತಿನಹೊಳೆ ಯೋಜನೆಯಲ್ಲಿ ಕುಡಿಯುವ ನೀರಿಗಾಗಿ ಪಾಯಿಂಟ್ 514 ಟಿಎಂಸಿ ನೀರು ಒದಗಿಸಲಾಗಿದೆ. ಈ ನೀರನ್ನು ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿಗಾಗಿ ಬಳಸಲು ಯೋಜನೆ ರೂಪಿಸಬೇಕು ಹಾಗೂ ಇದಕ್ಕೆ ಅಗತ್ಯ ಹಣಕಾಸಿನ ನೆರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪಡೆಯಬೇಕು ಎಂದು ಟಿ.ಬಿ. ಜಯಚಂದ್ರ ಅವರು ಇದೇ ವೇಳೆ ತಿಳಿಸಿದರು.

    ಈ ನಿಟ್ಟಿನಲ್ಲಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. EA Technologies ಮುಖ್ಯಸ್ಥ ರಾದ ರಂಗನಾಥ್ ಅವರು ಯೋಜನಾ ವರದಿ ಸಿದ್ಧಪಡಿಸಿ ಕೊಡುವುದಾಗಿ ಹೇಳಿದರು.

    ಗುರುತ್ವಾಕರ್ಷಣೆಯ ಮೂಲಕ ನೈಸರ್ಗಿಕವಾಗಿ ಕೆರೆಗಳಿಗೆ ನೀರು ಹರಿಯುವಂತೆ ಯೋಜನೆ ಸಿದ್ಧಪಡಿಸುವಂತೆ ವಿಶೇಷವಾಗಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಬಲಭಾಗದಲ್ಲಿ ಬರುವ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ಆ ಮೂಲಕ ಜನ ಹಾಗೂ ಜಾನುವಾರುಗಳಿಗೆ ನೀರು ಒದಗಿಸಬೇಕು‌ ಭವಿಷ್ಯದಲ್ಲಿ ಕೈಗಾರಿಕೆಗಳಿಗೆ ಸಹ ಸ್ವಲ್ಪ ಮಟ್ಟಿನ ನೀರು ಒದಗಿಸಲು ಯೋಜನೆ ರೂಪಿಸುವಂತೆ ಹೇಳಿದರು.

    ಗುಮ್ಮನ ಹಳ್ಳಿ ,ಅಗ್ರಹಾರ, ತಾಳಗುಂದ, ಬೆಟ್ಟನ ಹಳ್ಳಿ, ಚಿನ್ನೇನಹಳ್ಳಿ, ಕಾಳೆನಹಳ್ಳಿ, ಬ್ರಹ್ಮಸಂದ್ರ, ಸಿಬಿ, ದಾಸರಹಳ್ಳಿ ಹೊಸ ಮಲ್ಲೇನಹಳ್ಳಿ, ಹುಲಿಕುಂಟೆ ಹೋಬಳಿಯ ಹಳ್ಳಿಗಳು, ದೊಡ್ಡ ಬಾಣಗೆರೆ ಚಿಕ್ಕಬಾಣಗೆರೆ ಸೇರಿದಂತೆ ಎಲ್ಲ ಕೆರೆಗಳನ್ನು ತುಂಬಿಸಲು ಸಮರ್ಪಕವಾದ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ವಿಸ್ತೃತ ಯೋಜನೆ ಸಿದ್ಧಪಡಿಸಿದ ಮೇಲೆ ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆಗಳ ಜೊತೆ ಮಾತನಾಡಿ ಅಗತ್ಯ ಹಣ ತರುವುದಾಗಿ ತಿಳಿಸಿದರು . ಕುಡಿಯುವ ನೀರು ಹಾಗೂ ಕೆರೆ ತುಂಬುವ ಯೋಜನೆಗಳಿಗೆ ಕೇಂದ್ರ ಸರ್ಕಾರ ಹೊಸ ಕಾರ್ಯಕ್ರಮಗಳನ್ನು ರೂಪಿಸಿದ್ದು ಆ ಯೋಜನೆಯಡಿ ಹಣ ತರುವುದಾಗಿ ತಿಳಿಸಿದರು. ಆದಷ್ಟು ಬೇಗ ಎತ್ತಿನಹೊಳೆ ಯೋಜನೆಯಲ್ಲಿ  ತಮ್ಮ ಪಾಲಿನ ನೀರನ್ನು ಬಳಸಿಕೊಳ್ಳಬೇಕು . ಈ ಯೋಜನೆಗೆ ಅಗತ್ಯವಿರುವ ಹಣವನ್ನು ತಾವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಕೊಡಿಸುವುದಾಗಿ ಇದೇ ವೇಳೆ ಜಯಚಂದ್ರ ಅವರು ತಿಳಿಸಿದರು.

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಿರುವ ವಾಗ್ದಾನವಾಗಿದ್ದು, ಆರ್ಥಿಕ ಹೊರೆಯಾದರೂ ಸಹ ಕೊಟ್ಟ…

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.