nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಸಚಿವರ ತವರಿನಲ್ಲಿ ದಲಿತರ ದುಸ್ಥಿತಿ!: ದಲಿತ ದೌರ್ಜನ್ಯ ಬಗ್ಗೆ ದೂರು ನೀಡಿ 12 ದಿನಗಳಾದರೂ ಎಫ್ ಐಆರ್ ದಾಖಲಾಗಿಲ್ಲ!
    ತುಮಕೂರು November 29, 2023

    ಗೃಹ ಸಚಿವರ ತವರಿನಲ್ಲಿ ದಲಿತರ ದುಸ್ಥಿತಿ!: ದಲಿತ ದೌರ್ಜನ್ಯ ಬಗ್ಗೆ ದೂರು ನೀಡಿ 12 ದಿನಗಳಾದರೂ ಎಫ್ ಐಆರ್ ದಾಖಲಾಗಿಲ್ಲ!

    By adminNovember 29, 2023No Comments2 Mins Read
    tumakuru daliths

    ತುಮಕೂರು:  ದಲಿತ ಸಮುದಾಯದ ವ್ಯಕ್ತಿಯನ್ನು  ಜಮೀನು ದುರಸ್ತಿ ಮಾಡಿಕೊಡದೇ ಅಲೆದಾಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ  ತಹಶೀಲ್ದಾರ್ ಸಿದ್ದೇಶ್ ಹಾಗೂ ಇನ್ನಿತರರ ವಿರುದ್ಧ ಪೊಲೀಸ್ ಉಪಾಧೀಕ್ಷಕ ಅವರಿಗೆ  ದೂರು ನೀಡಲಾಗಿದ್ದರೂ, ದೂರು ನೀಡಿ 12 ದಿನಗಳಾದರೂ ಎಫ್ ಐಆರ್ ದಾಖಲಿಸದ ಹಿನ್ನೆಲೆಯಲ್ಲಿ ಮಂಗಳವಾರ(ನವೆಂಬರ್‌ 28) ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಹಕಾರೊಂದಿಗೆ ನೊಂದ ಯಲ್ಲಪ್ಪ ಕುಟುಂಬವು ಎಸ್ ಪಿ ಕಚೇರಿಯಲ್ಲಿ ಮತ್ತೆ ದೂರು ದಾಖಲಿಸಿದೆ.

    ಗೌರಿಪುರ ಸರ್ವೇ ನಂಬರ್‌ 5ರಲ್ಲಿ ಸರ್ಕಾರವು 1988ರಲ್ಲಿ ತನ್ನ ಹೆಸರಿಗೆ ಸಾಗುವಳಿ ಪತ್ರ ನೀಡಿ 1.16 ಎಕರೆ ಜಮೀನು ಮಂಜೂರು ಮಾಡಿತ್ತು. ಇದೇ ಸರ್ವೇ ನಂಬರ್‌ ನಲ್ಲಿ ಇತರೆ ಹಿಡುವಳಿದಾರರ ಹೆಸರು ಜಂಟಿ ಪಹಣಿಯಲ್ಲಿ ನಮೂದಾಗಿದ್ದು, ಇದುವರೆಗೂ ತನ್ನ ಜಮೀನು ದುರಸ್ತಿಯಾಗಿರುವುದಿಲ್ಲ. ಸರಿಪಡಿಸಿಕೊಡುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಯಾವುದೇ ಕ್ರಮಕೈಗೊಳ್ಳದೇ ತಹಶೀಲ್ದಾರ್‌ ಹಾಗೂ ಅಧಿಕಾರಿಗಳು ಅಲೆದಾಡಿಸುತ್ತಿದ್ದರು. ಆದ್ದರಿಂದ ತುಮಕೂರು ತಹಶೀಲ್ದಾರ್‌ ಸಿದ್ದೇಶ್‌ ಸೇರಿದಂತೆ ಇತರರ ವಿರುದ್ಧ  ಯಲ್ಲಪ್ಪ ಅವರು ಪೊಲೀಸ್‌ ಉಪಾಧೀಕ್ಷಕ ಚಂದ್ರಶೇಖರ್ ಅವರಿಗೆ  ದೂರು ನೀಡಿದ್ದರು. ಆದ್ರೆ, ದೂರು ನೀಡಿ 12 ದಿನಗಳಾದರೂ ಎಸ್‌ ಸಿ—ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಡಿಎಸ್‌ ಪಿ ಚಂದ್ರಶೇಖರ್ ಅವರು ಯಾವುದೇ ಕ್ರಮಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನೊಂದ ಕುಟುಂಬ  ಭೂಮಿಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಹಕಾರೊಂದಿದಿಗೆ ನೊಂದ ಯಲ್ಲಪ್ಪ ಕುಟುಂಬವು ತುಮಕೂರು ಎಸ್‌ ಪಿ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದ್ರೆ ಎಸ್‌ ಪಿ ಅವರು ಕಚೇರಿಯಲ್ಲಿ ಲಭ್ಯವಿರದ ಹಿನ್ನೆಲೆಯಲ್ಲಿ ಲಿಖಿತ ದೂರು ನೀಡಿದ್ದಾರೆ.

    ಯಲ್ಲಪ್ಪ ಅವರು ನೀಡಿದ ದೂರಿನ ಬಗ್ಗೆ ಡಿಎಸ್‌ ಪಿ ಚಂದ್ರಶೇಖರ್ ಅವರು, ಪೊಲೀಸ್‌ ಠಾಣೆಗೆ ನಿರ್ದೇಶನ ನೀಡಿ ಎಫ್‌ ಐಆರ್‌ ದಾಖಲಿಸಲು ಕ್ರಮಕೈಗೊಳ್ಳಬಹುದಾಗಿದ್ದರೂ,  ದೂರು ನೀಡಿ  12 ದಿನಗಳಾದರೂ ಉದ್ದೇಶ ಪೂರ್ವಕ ಅಥವಾ ಯಾವುದೋ ಆಮಿಷ ಒತ್ತಡಕ್ಕೆ ಮಣಿದು, ಜಾಣ ಕುರುಡು ಪ್ರದರ್ಶಿಸಲಾಗುತ್ತಿದೆ, ಇದು ಎಸ್‌ ಸಿ—ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯ ಉಲ್ಲಂಘನೆ  ಎಂದು ಭೂಮಿಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

    ದೂರು ನೀಡಿದರೂ ಕ್ರಮಕೈಗೊಳ್ಳದ ಡಿಎಸ್‌ ಪಿ ಚಂದ್ರಶೇಖರ್, ತುಮಕೂರು ತಹಶೀಲ್ದಾರ್‌ ಸಿದ್ದೇಶ್‌ ಸೇರಿದಂತೆ ಇತರರ ವಿರುದ್ಧ ಎಸ್ ಪಿ ಅವರ ಕಚೇರಿಯಲ್ಲಿ ಲಿಖಿತ ದೂರನ್ನು  ನೀಡಲಾಗಿದೆ.  ಕರ್ತವ್ಯ ಲೋಪ, ನಿರ್ಲಕ್ಷ್ಯ ಮಾಡಿರುವ ಅಧಿಕಾರಿಗಳ ವಿರುದ್ಧ ಎಸ್‌ ಸಿ ಎಸ್‌ ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

    ಗೃಹ ಸಚಿವರ ಸ್ವಕ್ಷೇತ್ರದ ದಲಿತರ ದುಸ್ಥಿತಿ ಇದು:

    ಗೃಹ ಸಚಿವರ ತವರಿನಲ್ಲೇ ದಲಿತರು ನ್ಯಾಯಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿರುವುದು ದುರಂತ, ದಲಿತರು ದೂರು ನೀಡಿದರೆ, ಗೃಹ ಸಚಿವರ ತವರಿನಲ್ಲೇ ದೂರು ದಾಖಲಾಗುವುದಿಲ್ಲ, ಇದನ್ನು ಗಮನಿಸಿದರೆ, ತನ್ನ ಸ್ವ ಕ್ಷೇತ್ರದಲ್ಲೇ ದಲಿತರಿಗೆ ನ್ಯಾಯ ಕೊಡದ ಗೃಹ ಸಚಿವರು ಇನ್ನೂ ರಾಜ್ಯದ ದಲಿತರಿಗೆ ಏನು ನ್ಯಾಯ ಕೊಡುತ್ತಾರೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದು ಭೂಮಿಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಬೇಸರ ವ್ಯಕ್ತಪಡಿಸಿದೆ.

    ಅನಿರ್ದಿಷ್ಟಾವಧಿ ಧರಣಿ ನಡೆಸುವ ಎಚ್ಚರಿಕೆ:

    ತುಮಕೂರು ಎಸ್ ಪಿ ಅವರು  ನೊಂದ ಕುಟುಂಬ ನೀಡಿರುವ ದೂರನ್ನು ಪರಿಶೀಲಿಸಿ  ಮೂರು ದಿನಗಳೊಳಗೆ   ತುಮಕೂರು ತಹಶೀಲ್ದಾರ್ ಸಿದ್ದೇಶ್ ಹಾಗೂ ಇನ್ನಿತರರ ವಿರುದ್ಧ ಎಫ್ ಐ ಆರ್ ದಾಖಲಿಸಬೇಕು.  ಪೊಲೀಸರು ಕ್ರಮಕೈಗೊಳ್ಳದಿದ್ದಲ್ಲಿ,  ಶೀಘ್ರದಲ್ಲೇ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರ ಮುಂಭಾಗ ಅನಿರ್ದಿಷ್ಠಾವಧಿ  ನೊಂದ ಕುಟುಂಬದವರೂ ಸೇರಿದಂತೆ ನೂರಾರು ಜನರೊಂದಿಗೆ  ಭೂಮಿಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಅನಿರ್ದಿಷ್ಟಾವಧಿ ಧರಣಿ ಕೈಗೊಳ್ಳುವುದಾಗಿ ಎಚ್ಚರಿಸಿದೆ

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ತುಮಕೂರು:  ಜಿಲ್ಲಾ ಪೊಲೀಸ್ ಕಛೇರಿಯ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಮತ್ತು ಗೌರವಗಳೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು…

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.