nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 13 ವರ್ಷ ಕಳೆದರೂ ಸೌಜನ್ಯಳಿಗೆ ಸಿಕ್ಕಿಲ್ಲ ನ್ಯಾಯ: ತುಮಕೂರಿನಲ್ಲಿ ಪ್ರತಿಭಟನೆ
    ತುಮಕೂರು October 10, 2025

    13 ವರ್ಷ ಕಳೆದರೂ ಸೌಜನ್ಯಳಿಗೆ ಸಿಕ್ಕಿಲ್ಲ ನ್ಯಾಯ: ತುಮಕೂರಿನಲ್ಲಿ ಪ್ರತಿಭಟನೆ

    By adminOctober 10, 2025No Comments2 Mins Read
    sowjanya protest

    ತುಮಕೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ನಡೆದು 13 ವರ್ಷಗಳಾದರೂ ಈವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.

    ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ರಾಜ್ಯವ್ಯಾಪಿ ‘ನ್ಯಾಯಕ್ಕಾಗಿ ಜನಾಗ್ರಹ ದಿನ’ಕ್ಕೆ ಕರೆ ನೀಡಿತ್ತು. ಈ ಕೆರೆಯ ಮೇರೆಗೆ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.


    Provided by
    Provided by

    ಧರ್ಮಸ್ಥಳದಲ್ಲಿ ದಾಖಲಾದ ನೂರಾರು ಅಸಹಜ ಸಾವು, ಕೊಲೆ, ಅತ್ಯಾಚಾರ, ಭೂ ಹಗರಣ, ದಲಿತರಿಗೆ ಸೇರಿದ ಭೂಮಿ ಕಬಳಿಕ ನಡೆಯುತ್ತಿದ್ದರೂ ಸಂತ್ರಸ್ತರಿಗೆ ಈವರೆಗೂ ನ್ಯಾಯ ಸಿಕ್ಕಿಲ್ಲ. ಸಾಲದ ಹೆಸರಿನಲ್ಲಿ ಬಡ್ಡಿ ದಂಧೆ ನಡೆಸುವವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ಕಿಡಿಕಾರಿದರು.

    ಲೇಖಕಿ ಬಾ.ಹ.ರಮಾಕುಮಾರಿ, ಸೌಜನ್ಯ ಅತ್ಯಾಚಾರ, ಕೊಲೆಯಾಗಿ 13 ವರ್ಷಗಳು ಸಂದರೂ ನೈಜ ಆರೋಪಿಗಳನ್ನು ಬಂಧಿಸದಿರುವುದು ನಾಗರಿಕ ಸಮಾಜಕ್ಕೆ ಮಾಡಿರುವ ಅಪಮಾನ. ಈಗ ಆರ೦ಭವಾಗಿರುವ ಎಸ್‌ಐಟಿ ತನಿಖೆ ಪ್ರಾಮಾಣಿಕ, ಪಾರದರ್ಶಕವಾಗಿ ನಡೆಯಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.

    ಹೋರಾಟಗಾರ್ತಿ ಕಲ್ಯಾಣಿ, ದೈವೀಕರಣದ ರೂಪಕೊಟ್ಟು ಎಸ್‌ ಐಟಿ ತನಿಖೆಯನ್ನು ದಾರಿ ತಪ್ಪಿಸಲು ಸರ್ಕಾರ ಬಿಡಬಾರದು. ಕಾನೂನು ಎಲ್ಲರಿಗೂ ಅನ್ವಯವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

    ಹೋರಾಟಗಾರ ಕೆ.ದೊರೈರಾಜು, ‘ನ್ಯಾಯಕ್ಕಾಗಿ ಚಳವಳಿ ನಡೆಸಿದರೆ ಅದನ್ನು ಕೆಲವು ಶಕ್ತಿಗಳು ವಿಕೃತಗೊಳಿಸಿ ಸಂತ್ರಸ್ತರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಜನರು ಹಿಮ್ಮೆಟ್ಟಿಸಬೇಕು’ ಎಂದು ಹೇಳಿದರು.

    ರೈತ, ಕಾರ್ಮಿಕ ಸಂಘಟನೆ ಮುಖಂಡ ಬಿ.ಉಮೇಶ್‌, ‘ವಿರೋಧ ಪಕ್ಷ ಬಿಜೆಪಿ ಬಹಿರಂಗವಾಗಿ ಎಸ್‌ ಐಟಿ ತನಿಖೆಗೆ ಒಪ್ಪಿಕೊಂಡು, ಇನ್ನೊಂದು ಕಡೆ ಬೆದರಿಕೆ ಹಾಕುತ್ತಿದೆ. ಇಂತಹ ನಿಲುವು ಬಿಟ್ಟು ಸಂತ್ರಸ್ತರ ಪರವಾಗಿ ಧ್ವನಿ ಎತ್ತಿಬೇಕು ಎಂದರು.

    ಸ್ಲಂ ಜನಾಂದೋಲನ ಸಂಘಟನೆ ಮುಖಂಡ ಎ.ನರಸಿಂಹಮೂರ್ತಿ, ‘ಧರ್ಮಸ್ಥಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆದಿರುವ ಕೊಲೆ, ಇತರ ಅಪರಾಧ ಪ್ರಕರಣಗಳನ್ನು ಭೂ ಹಗರಣಗಳಿಂದ ಪ್ರತ್ಯೇಕಿಸಿ ನೋಡಬಾರದು. ಜಮೀನು ಕಬಳಿಕೆ, ದಲಿತರು, ಆದಿವಾಸಿಗಳು, ಹಿಂದುಳಿದವರನ್ನು ಬಲವಂತವಾಗಿ ಒಕ್ಕಲೆಬ್ಬಿಸಲಾಗಿದೆ. ನಾಲೈದು ದಶಕಗಳಲ್ಲಿ ನಡೆದಿರುವ ಜಮೀನು ಪರಭಾರೆಯನ್ನೂ ಸೇರಿಸಿ ಸಮಗ್ರವಾಗಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

    ವಿವಿಧ ಸಂಘಟನೆಗಳ ಮುಖಂಡರಾದ ಕಂಬೇಗೌಡ, ಎನ್.ಇಂದ್ರಮ್ಮ, ಕಲ್ಪನ, ಅನುಪಮ, ಅರುಣ್‌, ಅಜ್ಜಪ್ಪ, ಎನ್.ಕೆ.ಸುಬ್ರಮಣ್ಯ, ಗಿರೀಶ್, ಸೈಯದ್‌ ಮುಜೀಬ್, ಲೋಕೇಶ್‌, ಇಂತು, ಷಣ್ಮುಖಪ್ಪ, ಮಂಜುಳ, ಉಮಾದೇವಿ, ಕಿಶೋರ್, ಜವಾಹರ್, ಅಶ್ವತ್ಥಯ್ಯ, ತಾಜುದ್ದೀನ್ ಮೊದಲಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.