ಮುಂಬೈನ ವಾಂಖೆಡೆ ಮತ್ತು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ಮತ್ತು ಸೋಮವಾರದಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಪಟಾಕಿ ಬಳಸುವುದನ್ನು ಬಿಸಿಸಿಐ ನಿಷೇಧಿಸಿದೆ.
ಬಾಂಬೆ ಹೈಕೋರ್ಟ್ ಮುಂಬೈನ ವಾಯು ಗುಣಮಟ್ಟವನ್ನು ಗಮನಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಪ್ರಾರಂಭಿಸಿದ ಬಳಿಕ ಬಿಸಿಸಿಐ ಈ ನಿರ್ಧಾರ ಪ್ರಕಟಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.


