ಹಿಂದೂ ವಿವಾಹ ಕಾಯಿದೆಯಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಕೂಡ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.
ದಂಪತಿ, ವಿಚ್ಚೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಮಾಡಿರುವ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯಪೀಠ ದಂಪತಿಗೆ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರಕ್ಕೆ ತೆರಳುವಂತೆ ನಿರ್ದೇಶನ ನೀಡಿತು.


