nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಿಕೆಯಲ್ಲಿ ಹಿಂದುಳಿದವರನ್ನೂ ಬುದ್ಧಿವಂತರಾಗಿಸಬೇಕು: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ June 19, 2024

    ಕಲಿಕೆಯಲ್ಲಿ ಹಿಂದುಳಿದವರನ್ನೂ ಬುದ್ಧಿವಂತರಾಗಿಸಬೇಕು: ಸಿಎಂ ಸಿದ್ದರಾಮಯ್ಯ

    By adminJune 19, 2024No Comments2 Mins Read
    cm siddaramaya

    ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು ನಾಲಾಯಕ್. ವಸತಿ ಶಾಲೆಗಳು ಬಡಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಬುದ್ಧಿವಂತರನ್ನು ಇನ್ನಷ್ಟು ಬುದ್ಧಿವಂತರಾಗಿಸುವುದು ಮಾತ್ರವಲ್ಲ, ಕಲಿಕೆಯಲ್ಲಿ ಹಿಂದುಳಿದವರನ್ನೂ ಬುದ್ಧಿವಂತರಾಗಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

    ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1,884ಕೋಟಿ ರೂ.ಗಳ ಪೈಕಿ 1,879ಕೋಟಿ ರೂ.ವೆಚ್ಚವಾಗಿದ್ದು, ಶೇ.99.75ರಷ್ಟು ಸಾಧನೆಯಾಗಿದೆ’ ಎಂದು ಹೇಳಿದರು.

    ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು-39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ.ಒದಗಿಸಲಾಗಿದೆ. ಎಸೆಸೆಲ್ಸಿ ಯಲ್ಲಿ ಶೇ.77ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶವನ್ನು ಇನ್ನಷ್ಟು ಉತ್ತಮ ಪಡಿಸಬೇಕು ಎಂದು ಅವರು ನಿರ್ದೇಶಕ ನೀಡಿದರು.

    ಹಾಸ್ಟೆಲ್‍ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‍ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು. ಕೆಲವು ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

    ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‍ಶೀಟ್ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಎಂದು ಸಿಎಂ ಸೂಚನೆ ನೀಡಿದರು.

    22 ಪ್ರಕರಣಗಳಲ್ಲಿ ಸಿಂಧುತ್ವ ಪ್ರಮಾಣ ಪತ್ರ ಹಲವು ವರ್ಷಗಳಿಂದ ಇತ್ಯರ್ಥಕ್ಕೆ ಬಾಕಿ ಇದ್ದು, ಇವುಗಳಲ್ಲಿ ಎಲ್ಲ ಪ್ರಕರಣಗಳನ್ನು ಸಿಆರ್ ಇ ಸೆಲ್‍ಗೆ ಕಳುಹಿಸದಂತೆ, ಗೊಂದಲವಿದ್ದಲ್ಲಿ ಮಾತ್ರ ಕಳುಹಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದರು.

    ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆಎಎಸ್ ಅಧಿಕಾರಿಯನ್ನು ನಿರ್ದೇಶಕರಾಗಿ ನೇಮಕ ಮಾಡುವುದು ಸೂಕ್ತ ಎಂದು ಅಪರ ಮುಖ್ಯ ಕಾರ್ಯದರ್ಶಿ ಅಭಿಪ್ರಾಯಪಟ್ಟರು. ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿ, ಮಾನವಶಾಸ್ತ್ರಜ್ಞರನ್ನು ಅವರ ಅಧೀನದಲ್ಲಿ ನೇಮಕಗೊಳಿಸುವ ಬಗ್ಗೆ ಪರಿಶೀಲನೆ ನಡೆಸಿ, ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಕೇರಳ ಮಾದರಿಯಲ್ಲಿ ಆಡಳಿತ ಮತ್ತು ಸಂಶೋಧನಾ ವಿಭಾಗಗಳನ್ನು ಪ್ರತ್ಯೇಕವಾಗಿ ರಚಿಸುವ ಬಗ್ಗೆ ಅಥವಾ ಒಡಿಶಾ ರಾಜ್ಯದ ಮಾದರಿ ಏನು ಎಂದು ಮಾಹಿತಿ ತರಿಸಿ, ಪರಿಶೀಲಿಸುವಂತೆ ಸೂಚಿಸಿದರು.

    ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹಮದ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

    ‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಇಲಾಖೆಯ ಸೂಚನೆಯಂತೆ 2023-24ರಲ್ಲಿ ಲಭ್ಯವಿದ್ದ 263 ಕೋಟಿ ರೂ.ಖಜಾನೆಗೆ ಜಮಾ ಮಾಡಲಾಗಿದೆ. ಫಲಾನುಭವಿಗಳ ಸಂಖ್ಯೆ ಕಡಿಮೆ ಇರುವುದರಿಂದ ಸಂದಿಗ್ಧ ಸ್ಥಿತಿ ಎದುರಾಗಿದ್ದು, ಫಲಾನುಭವಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು’ ಎಂದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.