ಬೆಂಗಳೂರು: ಕಾಂಗ್ರೆಸ್ ಸರಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಡವರು ಕಣ್ಣೀರು ಹಾಕುತ್ತಿದ್ದಾರೆ. ಈ ಸರಕಾರದ ಕ್ರಮಗಳು ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಟೀಕಿಸಿದರು.
ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಜನರ ಮೇಲೆ ಬರೆ ಎಳೆಯುತ್ತಿದ್ದಾರೆ, ಎರಡನೇ ಬಾರಿಗೆ ಇದೀಗ ಹಾಲಿನ ದರ ಏರಿಸುತ್ತಿದ್ದಾರೆ. ಹಿಂದಿನ ಬಿಜೆಪಿ ಸರಕಾರವು ಹೈನುಗಾರರಿಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಕಾಂಗ್ರೆಸ್ ಸರಕಾರವು ಹೈನುಗಾರರ ಪ್ರೋತ್ಸಾಹಧನ 700– 800 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದರು. ಸರಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4