ಬೆಂಗಳೂರು: ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಹೇಳಿದರು.
ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


