ರಾಯಚೂರು: ರಾಯಚೂರ ಜಿಲ್ಲೆಯ ಪ್ರವಾಸದಲ್ಲಿದ್ದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಬೋಸರಾಜು ಅವರು ಜನವರಿ 6ರಂದು ಜಿಲ್ಲಾಧಿಕಾರಿಗಳಾದ ನಿತೀಶ ಕೆ, ಸಹಾಯಕ ಆಯುಕ್ತರಾದ ಗಜಾನನ ಬಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ 700 ವರ್ಷಗಳ ರಾಯಚೂರಿನ ಐತಿಹಾಸಿಕ ಮಾವಿನ ಕೆರೆಯ ಅಭಿವೃದ್ಧಿ ಕಾಮಗಾರಿಯ ಪರಿವೀಕ್ಷಣೆ ನಡೆಸಿದರು.
ಸಚಿವರು ಇದೆ ವೇಳೆ, ಜಿಲ್ಲಾಧಿಕಾರಿಗಳು ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು.
ನಗರದ ನಾಗರಿಕರಿಗೆ ವಾಯುವಿಹಾರ ಜೊತೆಗೆ ಪ್ರೇಕ್ಷಣೀಯ ಸ್ಥಳವಾಗಿ ಈ ಕೆರೆ ಪ್ರದೇಶವು ಮಾರ್ಪಾಡಾಗುತ್ತಿರುವುದು ಸಂತಸದ ಸಂಗತಿ ಎಂದರು.
ಸ್ವಚ್ಚ ಮತ್ತು ಸುಂದರ ನಗರ ಹಾಗೂ ಅಂತರ್ಜಲ ವೃದ್ಧಿಗಾಗಿ ರಾಯಚೂರಿನ ಹೃದಯ ಭಾಗದಲ್ಲಿರುವ ಐತಿಹಾಸಿಕ ಮಾವಿನ ಕೆರೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಐತಿಹಾಸಿಕ ಮಾವಿನ ಕೆರೆ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಾವಿನ ಕೆರೆ ಸಮಗ್ರ ಅಭಿವೃದ್ಧಿಗೆ ಎಲ್ಲರು ಕೈಜೋಡಿಸಿ ಸಹಕರಿಸಬೇಕು ಎಂದು ಸಚಿವರು ರಾಯಚೂರ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಉಪಾಧ್ಯಕ್ಷರಾದ ಸಾಹಜಿದ್ ಸಮೀರ್, ಹರಿಬಾಬು ರಾಂಪೂರು, ನರಸಿಂಹಲು ಮಾಡಿಗಿರಿ, ಸದಸ್ಯರಾದ ಬಿ ರಮೇಶ, ಶ್ರೀನಿವಾಸ ರಡ್ಡಿ,ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಗುರುಸಿದ್ದಯ್ಯ ಹಿರೇಮಠ, ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಮೊಹ್ಮದ್ ಜಿಲಾನಿ, ಮುಖಂಡರಾದ ಮೊಹ್ಮದ್ ಶಾಲಂ, ಹಿರಿಯರಾದ ಜಯಣ್ಣ, ಕೆ ಶಾಂತಪ್ಪ, ಶಿವಮೂರ್ತಿ, ಶ್ರೀನಿವಾಸ ರಡ್ಡಿ, ನೀರಾವರಿ ಇಲಾಖೆಯ ಲೋಕೇಶ, ಎಡಿಎಲ್ ಆರ್, ಡಿಡಿಎಲ್ ಆರ್ ಭೀಮರಾಯ್ ಸೇರಿದಂತೆ ಅನೇಕರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx