ಮೈಸೂರು: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಅವರು ಮಾತನಾಡುತ್ತಿದ್ದರು.
ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.
ಸುಳ್ಳು ಸುದ್ದಿಗಳ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಕಾನೂನಿನಿಂದ ಮಾತ್ರವೇ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ, ಇದರ ವಿರುದ್ಧ ಸಮಾಜ ಧ್ವನಿಯೆತ್ತಿದಾಗ ಮಾತ್ರ ಅದು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q