ಪಾವಗಡ: ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯೇ ಚರಂಡಿಯಾಗಿ ಮಾರ್ಪಟ್ಟು, ರಸ್ತೆ ತುಂಬಾ ಕೊಳಚೆ ನೀರು ಹರಿದಾಡುತ್ತಿರುವ ಘಟನೆ ಪಾವಗಡ ತಾಲ್ಲೂಕಿನ ಕೋಟಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಚರಂಡಿ ವ್ಯವಸ್ಥೆ ಇಲ್ಲದ ಕೊಳಚೆ ನೀರು ರಸ್ತೆ ತುಂಬಾ ಹರಿಯುತ್ತಿದೆ ಇದರಿಂದ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಚರಂಡಿ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ರಸ್ತೆಯಲ್ಲೇ ಚರಂಡಿಯ ಕೊಳಚೆ ನೀರು ಹರಿದಾಡುತ್ತಿರುವುದರಿಂದ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ತಕ್ಷಣವೇ ಸರಿಯಾದ ಚರಂಡಿ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx