ತುಮಕೂರು: ವಿಜಯಪುರ ಜಿಲ್ಲೆ ಮಾನಸ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೈಸೂರು ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಗಳಿಗೆ 2025–26ನೇ ಸಾಲಿಗಾಗಿ 5ನೇ ತರಗತಿ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಮತ್ತು ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಯಲಿದೆ.
ಮಾನಸ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಗೆ ದಾಖಲಿಸಲು ಮೇ 18ರಂದು ಹಾಗೂ ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಗೆ ದಾಖಲಿಸಲು ಏಪ್ರಿಲ್ 12ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ.ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗಬಹುದಾಗಿದೆ.
ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಲು ಇಚ್ಛಿಸಿದಲ್ಲಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರನ್ನು ಏಪ್ರಿಲ್ 4ರೊಳಗಾಗಿ ಸಂಪರ್ಕಿಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಒದಗಿಸಬೇಕು. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ತಮ್ಮ ಪಾಲಕರೊಂದಿಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4