ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ಶುಕ್ರವಾರ ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಸಚಿವ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx