ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್ಬಿಸಿಎಲ್ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ.
ಕಳೆದ ಕೆಲವು ವರ್ಷಗಳಿಂದ ಹೊಸ ವರ್ಷ ಆಚರಣೆಗೆ ಸಾಕಷ್ಟು ನಿರ್ಬಂಧ ಹಾಕಲಾಗಿತ್ತು. ಈ ಬಾರಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿಲ್ಲದ ಕಾರಣ, ರಾತ್ರಿ 1ರಿಂದ 2 ಗಂಟೆಗಳ ವರೆಗೆ ಹೊಸ ವರ್ಷಾಚರಣೆ ಸುಸೂತ್ರವಾಗಿ, ಸಂಭ್ರಮದಿಂದ ಆಚರಿಸಲ್ಪಟ್ಟಿದೆ.
ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತುಈ ಬಾರಿ ಒಟ್ಟು 308 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx