ಹೈದರಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ 8 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಶಮಿಲಾರಂನ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದೆ.
ರಿಯಾಕ್ಟರ್ ಸ್ಫೋಟಗೊಳ್ಳುತ್ತಿದ್ದಂತೆ, ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಯಿಂದಾಗಿ ಕಾರ್ಮಿಕರ ಮೃತದೇಹಗಳು 100 ಮೀಟರ್ ದೂರಕ್ಕೆ ಹಾರಿಬಿದ್ದಿವೆ. ಈ ವೇಳೆ, ಕೆಲವರು ಕಾರ್ಖಾನೆಯ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ಸಿಲುಕಿದ್ದವರ ರಕ್ಷಣೆ ಮಾಡಿದ್ದಾರೆ.
ಘಟನಾ ಸ್ಥಳದಿಂದ ಆರು ಶವಗಳನ್ನು ಹೊರತೆಗೆಯಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಕೆಲವು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್ ಒಂದು ಔಷಧೀಯ ಕಂಪನಿಯಾಗಿದ್ದು, ಔಷಧಿ, ಚಿಕಿತ್ಸೆಗೆ ಬೇಕಾದ ಸಹಾಯಕ ವಸ್ತುಗಳನ್ನು ಉತ್ಪಾದಿಸುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW