ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ತನ್ನ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮಾಂನಾಂತರ ಕೋರ್ಸಿನ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 11ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಆಸಕ್ತರು ಜಾಲತಾಣ https://shp.karnataka.gov.in ಮೂಲಕ ನವೆಂಬರ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಅಥವಾ ದೂರವಾಣಿ ಸಂಖ್ಯೆ: 0816–2273724ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296