ತುಮಕೂರು: ಬೆಸ್ಕಾಂ ನಗರ ಉಪವಿಭಾಗ–1, 2, 3; ಗ್ರಾಮೀಣ ಉಪವಿಭಾಗ–1, 2; ಗುಬ್ಬಿ ಹಾಗೂ ನಿಟ್ಟೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಕೃಷಿ ನೀರಾವರಿ ಪಂಪ್ ಸೆಟ್‌ಗಾಗಿ 50 ರೂ. ಶುಲ್ಕ ಪಾವತಿಸಿ ನೋಂದಾಯಿಸಿಕೊಂಡಿರುವ ರೈತರು ಉಳಿದ ನಿಗಧಿತ ಶುಲ್ಕ 10,000 ರೂ.ಗಳನ್ನು ಪಾವತಿಸಿ ಸಕ್ರಮೀಕರಣಗೊಳಿಸಿಕೊಳ್ಳುವ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.
ಗ್ರಾಹಕರು ನಿಗದಿತ ಶುಲ್ಕ ಹಾಗೂ ಅಗತ್ಯ ದಾಖಲೆಗಳನ್ನು ಮಾರ್ಚ್ 31ರೊಳಗಾಗಿ ಸಂಬಂಧಿಸಿದ ಉಪವಿಭಾಗ ಶಾಖೆಗಳಿಗೆ ಸಲ್ಲಿಸಿ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು ಸಕ್ರಮೀಕರಣಗೊಳಿಸಿಕೊಳ್ಳಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4