2023-24ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ದಾಖಲಾತಿಗೆ ನೀಡಲಾಗಿದ್ದ ದಂಡ ಶುಲ್ಕ ರಹಿತ ಕಾಲಾವಕಾಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವಿಸ್ತರಿಸಿದೆ. ಜೂನ್ 30 ರವರೆಗೆ ವಿಸ್ತರಿಸಿದೆ. ದಂಡ ಶುಲ್ಕ ಸಹಿತವಾಗಿ ಜು.10 ರವರೆಗೆ, ವಿಶೇಷ ದಂಡ ಶುಲ್ಕ ಪಾವತಿಸಿ ಜು. 20 ರವರೆಗೆ ದಾಖಲಾತಿ ಪಡೆಯಲು ಅವಕಾಶ ನೀಡಿದೆ.
ಈ ಮೊದಲು ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಲು ಜೂ. 15 ಕೊನೆಯ ದಿನವಾಗಿತ್ತು. ದಂಡ ಶುಲ್ಕದೊಂದಿಗೆ ದಾಖಲಾತಿಗೆ ಜೂ. 22ರವರೆಗೆ ಅವಕಾಶ ನೀಡಲಾಗಿತ್ತು. ಆದರೆ, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಿಗೆ ದಾಖಲಾತಿ ಬಯಸಿ ಬರುವ ಬಡ ವಿದ್ಯಾರ್ಥಿಗಳಿಗೆ ದಂಡ ಶುಲ್ಕ ಕಟ್ಟುವುದು ಕಷ್ಟವಾಗಲಿದೆ, ಹಾಗಾಗಿ ದಂಡ ಶುಲ್ಕ ರಹಿತ ದಾಖಲಾತಿಗೆ ಜೂ. 27 ರವರೆಗೆ ಕಾಲಾವಕಾಶ ವಿಸ್ತರಿಸುವಂತೆ ಮನವಿ ಮಾಡಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಇಲಾಖೆಗೆ ಪತ್ರ ಬರದಿತ್ತು.
ಇದನ್ನು ಪರಿಗಣಿಸಿದ ಇಲಾಖೆ ಇದೀಗ ಜೂ. 30 ರವರೆಗೆ ದಂಡ ಶುಲ್ಕ ರಹಿತ ದಾಖಲಾತಿಗೆ ಅವಕಾಶ ನೀಡಿದೆ. ಜೂ, 30ರ ನಂತರ ಜು.10ರವರೆಗೆ 670 ರು. ದಂಡ ಶುಲ್ಕದೊಂದಿಗೆ, ಜು. 10ರ ನಂತರ ಜು. 20ರವರೆಗೆ 2890 ರು. ವಿಶೇಷ ದಂಡ ಶುಲ್ಕ ಪಾವತಿಸಿ ದಾಖಲಾತಿ ಪಡೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


