ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಳೆದು ಚುನಾವಣೆಯಲ್ಲಿ 1 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಇದೀಗ 9 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದೆ. ಆದರೆ ಈ ಬೆನ್ನಲ್ಲೇ ಬಳ್ಳಾರಿಯಲ್ಲಿ ಶ್ರೀರಾಮುಲು ವಿರುದ್ಧ ಜಯಭೇರಿ ಬಾರಿಸಿದ ಸಂಸದ ತುಕಾರಾಂ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವಿಚಾರವೊಂದು ಸದ್ದು ಮಾಡುತ್ತಿದೆ.
ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಸಾರ್ವಜನಿಕ ವಲಯದಲ್ಲಿ ಉತ್ತಮ ಅಭಿಪ್ರಾಯ ಮೂಡಿಸಿರುವ ತುಕಾರಾಂ ಅವರು ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾಜಿ ಸಚಿವ, ಬಿಜೆಪಿ ನಾಯಕ ಶ್ರೀರಾಮುಲು ಅವರನ್ನು ಹೀನಾಯವಾಗಿ ಸೋಲಿಸಿದ್ದಾರೆ. ಆದರೀಗ ನೂತನ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಹೋಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪದ ಮೇಲೆ ಸಿದ್ದರಾಮಯ್ಯ ಸಂಪುಟದಿಂದ ಬಿ ನಾಗೇಂದ್ರ(Nagendra) ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ತುಕಾರಾಂ ಅಭಿಮಾನಿಗಳು ಸಭೆ ನಡೆಸಿ ತಮ್ಮ ನಾಯಕನನ್ನು ಸಂಪುಟಕ್ಕೆ ಸೇರ್ಪಡೆ ಮಾಬೇಕೆಂದು ಒತ್ತಾಯಿಸಿದ್ದಾರೆ. ಹೀಗಾಗಿ ತುಕಾರಾಂ ಅವರು ಇದೀಗ ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ ತುಕಾರಾಂ ಅವರು ಈ ವಿಚಾರವನ್ನು ತಳ್ಳಿಹಾಕಿದ್ದಾರೆ ಎನ್ನಲಾಗಿದೆ. ಇನ್ನು ರಾಜಕೀಯ ವಲಯದಲ್ಲಿ ಏನು ಬೇಕಾದರೂ ನಡೆಯಬಹುದು. ಒಂದು ವೇಳೆ ತುಕಾರಾಂ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪುತ್ರಿ ಸೌಪರ್ಣಿಕಾಗೆ ಬಳ್ಳಾರಿ ಲೋಕಸಭೆ ಟಿಕೆಟ್ ಕೇಳುವ ಸಾಧ್ಯತೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


