ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ, ಪ್ರತ್ಯೇಕ ಸಭೆಗಳು, ಚುಚ್ಚುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಯತ್ನಾಳ್ ಸೇರಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರವಾಗಿ ಇಂತಹ ಸಭೆ ನಮಗೆ ಹೊಸದೇನಲ್ಲ ಎಂದು ಹೇಳಿಕೆ ನೀಡಿದರು.
ಯಡಿಯೂರಪ್ಪ ಅವಧಿಯಲ್ಲಿ ಅನೇಕ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ. ಇಂತಹ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತೇನೆ ಎಂದು ಯತ್ನಾಳ್ ಹಾಗೂ ತಂಡಕ್ಕೆ ಪ್ರತ್ಯುತ್ತರ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296