ತುಮಕೂರು: ಗುಬ್ಬಿ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಅಕ್ರಮ–ಸಕ್ರಮ ಯೋಜನೆಯಡಿ ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಗ್ರಾಹಕರು ಅಕ್ರಮ–ಸಕ್ರಮ ಯೋಜನೆಯಡಿ 2015 ರಿಂದ 2022ರ ಮಾರ್ಚ್ ಮಾಹೆವರೆಗೆ ಹಣ ಪಾವತಿಸಿರುವ ರೈತರಿಗೆ ಸೌಲಭ್ಯ ವಿತರಣೆಗೆ ಸ್ಥಳ ಪರಿಶೀಲನೆಗೆ ಸಂಬಂಧಿಸಿದ ಶಾಖಾಧಿಕಾರಿಗಳು ಭೇಟಿ ನೀಡಲಿದ್ದು, ಭೇಟಿ ಸಂದರ್ಭದಲ್ಲಿ ಹಣ ಪಾವತಿಸಿದ ಆರ್.ಆರ್ ನಂಬರ್ಗಳ ಸ್ಥಾವರಗಳ ಸ್ಥಳ ಪರಿಶೀಲನೆ ಹಾಗೂ ಅಂದಾಜು ಪಟ್ಟಿ ತಯಾರಿಕೆಗೆ ಸಹಕರಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಗುಬ್ಬಿ ಶಾಖೆ-9449844214–47, ಚೇಳೂರು ಶಾಖೆ–9449844223 ಮತ್ತು ಸಿ.ಎಸ್.ಪುರ ಶಾಖೆ–9449844232ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296