ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಹುಸಿ ಬಾಂಬ್ ಬೆದರಿಕೆ ಬಂದಿದೆ.
ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ.
Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾಂಬ್ ಬೆದರಿಕೆ ಹಿನ್ನೆಲೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದಾಗ ಹುಸಿ ಬಾಂಬ್ ಕರೆ ಎನ್ನುವುದು ತಿಳಿದು ಬಂದಿದೆ.