ಬೆಳಗಾವಿ: ರಾಜ್ಯದ ತೆರಿಗೆದಾರರ ಹಣದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಐತಿಹಾಸಿಕ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭವನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಸ್ವಾತಂತ್ರ್ಯ ಪೂರ್ವದ ಭಾರತದ ಕಾಂಗ್ರೆಸ್‌ಗಿಂತ ಇಂದಿನ ಕಾಂಗ್ರೆಸ್ ಬಹಳ ಭಿನ್ನವಾಗಿದೆ. ಮಹಾತ್ಮ ಗಾಂಧಿ ಅವರನ್ನು ಗೌರವಿಸಲು ಉದ್ದೇಶಿಸಲಾಗಿದ್ದ ಈ ಕಾರ್ಯಕ್ರಮವು ಪಕ್ಷದ ಸಾಧನೆಗಳನ್ನು ಪ್ರದರ್ಶಿಸುವ ‘ನಕಲಿ ಗಾಂಧಿ’ಗಳ ಸಭೆಯಾಗಿ ಮಾರ್ಪಾಡಾಗಿದೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಶಾಸಕ ಅಭಯ ಪಾಟೀಲ ಮಾತನಾಡಿ, ಮಹಾತ್ಮಾ ಗಾಂಧಿಯವರ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ 250 ಕೋಟಿ ಮತ್ತು ರಾಜ್ಯ ಸರ್ಕಾರದಿಂದ ರೂ. 500 ಕೋಟಿಗೆ ಮನವಿ ಸೇರಿದಂತೆ ಶತಮಾನೋತ್ಸವದ ಅಧಿವೇಶನದ ಅದ್ಧೂರಿ ಆಚರಣೆಯನ್ನು ಈ ಹಿಂದೆ ಪ್ರಸ್ತಾಪಿಸಿದ್ದೆ. ಆ ಸಮಯದಲ್ಲಿ ಕಾಂಗ್ರೆಸ್ ಯಾವುದೇ ಆಸಕ್ತಿ ತೋರಿಸಲಿಲ್ಲ, ಈಗ ಸ್ಥಳೀಯ ಶಾಸಕರು ಮತ್ತು ಸಂಸದರನ್ನು ಹೊರಗಿಟ್ಟು ಇದನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx