ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭ ಸಮೀಪಿಸುತ್ತಿದ್ದಂತೆ ದುಷ್ಕರ್ಮಿಗಳು ಹೊಸ ಹಗರಣಗಳಿಗೆ ಮುಂದಾಗಿದ್ದಾರೆ.
ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕ್ಯೂಆರ್ ಕೋಡ್ ಬಳಸಿ ವಂಚನೆ ಮಾಡಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ ವಕ್ತಾರ ವಿನೋದ್ ಬನ್ಸಾಲ್ ಈ ಬಗ್ಗೆ ಮಾತನಾಡಿ, ಗ್ರಾಹಕರಿಗೆ ಹಣ ನೀಡುವಂತೆ ಕೇಳುತ್ತಿರುವುದು ಕಂಡು ಬಂದಿದೆ.
ಇಂಥವರನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ವಿಎಚ್ ಪಿ ಪೊಲೀಸರಿಗೆ ಸೂಚಿಸಿದೆ. ಈ ಮೋಸಕ್ಕೆ ಜನ ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.


