ಮಂಡ್ಯ: ಮಹಿಳೆಯೊಬ್ಬಳು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪದ್ಮ.ವಿ (36) ಮೃತ ದುರ್ದೈವಿಯಾಗಿದ್ದಾರೆ.
ಪದ್ಮ ರಾಮನಗರ ತಾಲೂಕಿನ ಅಂಕನಹಳ್ಳಿ ಗ್ರಾಮದವಳು. ಮಂಡ್ಯದ ಸಿದ್ದರಾಜು ಎಂಬಾತನನ್ನು ಪ್ರೀತಿಸಿ ಪದ್ಮ ಮದುವೆ ಆಗಿದ್ದಳು. ಸಿದ್ದರಾಜು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ. 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಜೀವನ ನಡೆಸುತ್ತಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದರು. ಇತ್ತೀಚೆಗೆ ಸಿದ್ದರಾಜು ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಹೀಗಾಗಿ ಇದರಿಂದ ನೊಂದ ಪದ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


