ಕೃಷಿ ಹೊಂಡಕ್ಕೆ ಬಿದ್ದು ಮಾಜಿ ಪ್ರಿಯಕರನೊಂದಿಗೆ ವಿವಾಹಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ದೊಡ್ಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಅನುಷಾ (19), ವೇಣು (21) ಮೃತರು ಎಂದು ಗುರುತಿಸಲಾಗಿದೆ.
ಈ ಜೋಡಿಗಳು 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಚೌಡರೆಡ್ಡಿ ಎಂಬ ವ್ಯಕ್ತಿ ಜೊತೆಯಲ್ಲಿ ಯುವತಿಗೆ ಮನೆಯವರು ಮದುವೆ ಮಾಡಿದ್ದರು. ಆಷಾಡಕ್ಕೆ ಎಂದು ಮನೆಗೆ ಬಂದಾಗ ಯುವತಿ ಮತ್ತೆ ಹಳೆ ಪ್ರೇಮಿಯ ಜೊತೆ ಸಂಪರ್ಕ ಬೆಳೆಸಿದ್ದಳು. ಮೊದಲೇ ಪ್ರೀತಿಗೆ ನಿರಾಕರಿಸಿದ್ದ ಕುಟುಂಬ. ಹಾಗಾಗಿ ಮತ್ತೆ ಇಬ್ಬರು ಒಟ್ಟಿಗೆ ಬಾಳಲು ಬಿಡುವುದಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಆಷಾಡಕ್ಕೆ ತವರು ಮನೆಗೆ ಬಂದ ವೇಳೆ ಸೊಂಟಕ್ಕೆ ವೇಲ್ ಬಿಗಿದುಕೊಂಡು ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


