ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ ನಟಿ ಸೌಮ್ಯ ಶೆಟ್ಟಿ ಇದೀಗ ಕಳ್ಳತನ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದೊಂಡಪರ್ತಿ ಬಾಲಾಜಿ ರೆಸಿಡೆನ್ಸಿಯಲ್ಲಿ ನೆಲೆಸಿದ್ದ ಪ್ರಸಾದ್ ಎಂಬ ಸೇನೆಯ ನಿವೃತ್ತ ಅಧಿಕಾರಿ ಮನೆಯಲ್ಲಿ ಕಳ್ಳತನವಾಗಿದ್ದು, ಈ ಪ್ರಕರಣದಲ್ಲಿ ಸೌಮ್ಯ ಶೆಟ್ಟಿ ಅವರನ್ನು ಬಂಧಿಸಲಾಗಿದೆ. ಪರಿಚಿತರ ಮನೆಯಲ್ಲಿ ಬರೋಬ್ಬರಿ ಒಂದು ಕೆಜಿ ಚಿನ್ನ ಕದ್ದು ಸೌಮ್ಯ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.
ನಿವೃತ್ತ ಸೇನಾ ನೌಕರ ಪ್ರಸಾದ್ ಅವರ ಮಗಳ ಜೊತೆ ಸೌಮ್ಯ ಶೆಟ್ಟಿ ಸ್ನೇಹ ಬೆಳೆಸಿದ್ದರು. ಆ ಮನೆಯಲ್ಲಿ ಬಂಗಾರ ಇರುವುದು ಗೊತ್ತಾಗಿ, ವಾಶ್ ರೂಮ್ ಗೆ ಹೋಗುವ ನೆಪದಲ್ಲಿ ಕಳ್ಳತನ ಮಾಡುತ್ತಿದ್ದಳು ಎಂದು ದೂರು ನೀಡಲಾಗಿದೆ.
ಕಳೆದ ತಿಂಗಳು 23 ರಂದು ಮನೆಗೆ ನುಗ್ಗಿ ಪ್ರಸಾದ್ ಅವರ ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ ಎಗರಿಸಿಕೊಂಡು ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


