ಮುಂಬೈ : ಗನ್ ಮಿಸ್ ಫೈರ್ ಆಗಿ ಬಾಲಿವುಡ್ ನಟರೊಬ್ಬರು ಗಾಯಗೊಂಡ ಘಟನೆ ಇಂದು ಮುಂಜಾನೆ ನಡೆದಿದ್ದು, ಗನ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಬಾಲಿವುಡ್ ನಟ ಗೋವಿಂದ್ ಅವರ ಕಾಲಿಗೆ ಗುಂಡೇಟು ತಗುಲಿದ್ದು, ಗನ್ ಮಿಸ್ ಫೈರ್ ಆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟ ಗೋವಿಂದ್ ಹಾಗೂ ಕುಟುಂಬಸ್ಥರು ಯಾವುದೇ ಹೇಳಿಕೆ ನೀಡಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವಿಂದ್ ಅವರ ಬಳಿ ಇರುವ ಗನ್ ಪರವಾನಗಿ ಹೊಂದಿದ ಗನ್ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296