ಕೇರಳದಲ್ಲಿ ಹೇಮಾ ಕಮಿಟಿಯ (Hema committee) ವರದಿ ಹೊರಬಿದ್ದ ನಂತರ ಹಲವು ನಟಿಯರು ತಮಗಾಗಿರುವ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡುತ್ತಿದ್ದಾರೆ. ಹಲವು ನಿರ್ದೇಶಕರು, ನಟರು, ನಿರ್ಮಾಪಕರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆತಂಕಕಾರಿ ಮಾಹಿತಿಗಳು ಹೊರ ಬೀಳುತ್ತಿವೆ.
ಹೀಗಿರುವಾಗ, ಮಲಯಾಳಂನ ಖ್ಯಾತ ನಟ ನಿವಿನ್ ಪೌಲಿ (Malayalam Actor Nivin Pauly) ವಿರುದ್ಧ ಸಹ ಮಹಿಳೆಯೊಬ್ಬಳು ದೂರು ನೀಡಿದ್ದಾರೆ. ನಟ ನಿವಿನ್ ಪೌಲಿ ಮತ್ತು ಇತರ ಐವರು ದುಬೈನಲ್ಲಿ (Dubai) ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ನಟ ನಿವಿನ್ ಪೌಲಿ ಹಾಗೂ ಇತರರು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ನನ್ನನ್ನು ದುಬೈಗೆ ಕರೆಸಿಕೊಂಡಿದ್ದರು. ಆರೋಪಿಗಳು ಮೂರು ದಿನಗಳ ಕಾಲ ಆಹಾರ ಮತ್ತು ನೀರಿಲ್ಲದ ಕೋಣೆಯಲ್ಲಿ ನನ್ನನ್ನು ಕೂಡಿಹಾಕಿದ್ದರು. ನಗೆ ಮಾದಕ ದ್ರವ್ಯವನ್ನು ಸಹ ನೀಡಿ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತಾನು ಮೊದಲು ದುಬೈನಲ್ಲಿ ಪೌಲಿ ಮತ್ತು ಇತರ ಐವರನ್ನು ಭೇಟಿಯಾದೆ, ಅಲ್ಲಿ ಅವರು ಯುರೋಪಿಗೆ ಕರೆದೊಯ್ಯುವ ಭರವಸೆಯೊಂದಿಗೆ 3 ಲಕ್ಷ ರೂ.ಗಳನ್ನು ತೆಗೆದುಕೊಂಡರು ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಆರೋಪಿಗಳಲ್ಲಿ ಒಬ್ಬರಾದ ನಿರ್ಮಾಪಕ ಎ.ಕೆ.ಸುನಿಲ್ ಅವರ ಬಗ್ಗೆ ಮಹಿಳೆ ಹೇಳಿಕೊಂಡಿದ್ದಾರೆ.
ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ನಿವಿನ್ ಪೌಲಿ ಮತ್ತು ಇತರ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉನ್ನೂಕಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಆರು ಮಂದಿ ಆರೋಪಿಗಳಿದ್ದಾರೆ. ಮೊದಲ ಆರೋಪಿ ಮಹಿಳೆ ಮತ್ತು ನಿವಿನ್ ಆರನೇ ಆರೋಪಿ ಎಂದು ತಿಳಿಸಿದ್ದಾರೆ. ಘಟನೆಯ ಬಗ್ಗೆ ನಟ ನಿವಿನ್ ಪೌಲಿ ರಾತ್ರೋರಾತ್ರಿ ಪತ್ರಿಕಾಗೋಷ್ಟಿ ನಡೆಸಿ ಪ್ರತಿಕ್ರಿಯೆ ನೀಡಿದ್ದು, ನಾನು ಆ ಮಹಿಳೆಯನ್ನು ಎಂದಿಗೂ ಭೇಟಿ ಮಾಡಿಲ್ಲ. ಇದು ನನ್ನ ವಿರುದ್ಧ ನಡೆದಿರುವ ಪಿತೂರಿ ಎಂದು ತಿಳಿಸಿದ್ದಾರೆ.
ಇನ್ ಸ್ಟಾಗ್ರಾಮ್ ಪೋಸ್ಟ್ ಮೂಲಕ ಸಹ ನಿವಿನ್ ಪೌಲಿ ಪ್ರತಿಕ್ರಿಯಿಸಿದ್ದಾರೆ. ʼನಾನು ಹುಡುಗಿಯ ಮೇಲೆ ದೌರ್ಜನ್ಯ ಎಸಗಿರುವ ಆರೋಪದ ಸುಳ್ಳು ಸುದ್ದಿ ವರದಿಯನ್ನು ನೋಡಿದೆ. ಇದು ಸಂಪೂರ್ಣವಾಗಿ ಸುಳ್ಳು. ಈ ಆರೋಪಗಳು ಆಧಾರರಹಿತ ಎಂದು ಸಾಬೀತುಪಡಿಸಲು ನಾನು ಯಾವುದೇ ಹಂತಕ್ಕೂ ಹೋಗಲು ಸಿದ್ಧ. ಈ ಪಿತೂರಿಯ ಹಿಂದಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ. ನಿಮ್ಮ ಕಾಳಜಿಗೆ ಧನ್ಯವಾದಗಳುʼ ಎಂದು ಪೋಸ್ಟ್ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q