nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
    ಕೊರಟಗೆರೆ March 29, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    By adminMarch 29, 2026No Comments2 Mins Read
    koratagere

    ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದ ಮೃತ ರೈತ ರಮೇಶ್ ಮನೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಆದೇಶದ ಮೇರೆಗೆ ತಹಶೀಲ್ದಾರ್ ಮಂಜುನಾಥ್ ಕೆ. ಮತ್ತು ಕೃಷಿ ಅಧಿಕಾರಿ ರುದ್ರಪ್ಪ ಭೇಟಿ ನೀಡಿದ್ದಾರೆ.

    ಹೈನುಗಾರಿಕೆಗೆಂದು ಮೈಕ್ರೋ ಫೈನಾನ್ಸ್ ಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿ ಸಾಲದ ಕಂತುಗಳನ್ನು ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದ ಜೋನಿಗರಹಳ್ಳಿ ಗ್ರಾಮದ ಬಡ ರೈತ ರಮೇಶ್ ನಿವಾಸಕ್ಕೆ ತಹಶೀಲ್ದಾರ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿ ಧೈರ್ಯ ತುಂಬಲಾಯಿತು.


    Provided by
    Provided by

    ರೈತ ರಮೇಶ್ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ. ಮೃತರ ಮನೆಗೆ ಭೇಟಿ ನೀಡಿ, ಮೃತ ರೈತ ರಮೇಶ್ ರವರ ಮರಣ ಪ್ರಮಾಣ ಪತ್ರ, ರಮೇಶ್ ಪತ್ನಿಗೆ ವಿಧವಾ ವೇತನ ಮಂಜೂರಾತಿ ಆದೇಶ ಪತ್ರ ನೀಡಿ ಕೊರಟಗೆರೆ ತಾಲ್ಲೂಕು ಆಡಳಿತ ನೊಂದ ಕುಟುಂಬದ ಜೊತೆ ಸದಾ ಕಾಲ ನಿಲ್ಲಲಿದೆ ಎಂದು ಧೈರ್ಯ ತುಂಬಿದ್ದಾರೆ.

    ಶುಕ್ರವಾರ ಬೆಳಗ್ಗೆ ಮೃತ ರೈತನ ಮನೆಗೆ ಭೇಟಿ ನೀಡಿ ಆತ್ಮಹತ್ಯೆ ಪರಿಹಾರ ನಿಧಿಗೆ ಅಗತ್ಯ ಇರುವ ದಾಖಲೆಗಳನ್ನು ಪಡೆದು ಮತ್ತು ವಿಧವಾ ವೇತನದ ಮಂಜೂರಾತಿ ಆದೇಶಕ್ಕೆ ಅರ್ಜಿ ಸಲ್ಲಿಸಿಕೊಂಡಿದ್ದರು.

    ಸಂಜೆಯೊಳಗೆ ಮೃತರ ಮರಣ ಪ್ರಮಾಣ ಪತ್ರ ಮತ್ತು ವಿಧವಾ ವೇತನದ ಮಂಜುನಾಥ ಆದೇಶ ಪತ್ರ ನೀಡಿದ್ದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ನಂತರ ಮಾತನಾಡಿದ ತಹಶೀಲ್ದಾರ್ ಕೆ. ಮಂಜುನಾಥ್, ರೈತ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ತಿಳಿದ ಕೂಡಲೇ ತಾಲೂಕು ಆಡಳಿತ ಮೃತನ ಮನೆಗೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪರಿಶೀಲನೆ ಮಾಡಿ, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾದ ನಂತರ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ರೈತ ಕುಟುಂಬಕ್ಕೆ ಒದಗಿಸಿ, ರೈತ ರಮೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ನೈಜ ಪ್ರಕರಣವೆಂದು ದೃಢವಾಗಿದೆ ಎಂದು ತಿಳಿಸಿದ್ದಾರೆ. ನಂತರ ರೈತರ ಆತ್ಮಹತ್ಯೆ ಪರಿಹಾರ ನಿಧಿಯನ್ನು ಅತಿ ಶೀಘ್ರದಲ್ಲೇ ನೀಡುವುದಾಗಿ ಭರವಸೆ ನೀಡಿ ಕುಟುಂಬ ಜೊತೆಗೆ ಸರ್ಕಾರ ನಿರಂತರವಾಗಿ ನಿಲ್ಲುವುದು ಎಂದು ಧೈರ್ಯ ತುಂಬಿದ್ದಾರೆ..

    ನಂತರ ಮಾತನಾಡಿದ ನಿವೃತ್ತ ಶಿಕ್ಷಕ ಚನ್ನಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯ ಮೇರೆಗೆ ಮತ್ತು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾಲೂಕು ಆಡಳಿತ ರೈತನ ಮನೆಗೆ ಕೆಲವೇ ಗಂಟೆಗಳಲ್ಲಿ ಧಾವಿಸಿ, ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ವಿತರಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳು ಅರ್ಪಿಸುತ್ತೇವೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ರುದ್ರಪ್ಪ, ಉಪ ತಹಶೀಲ್ದಾರ್ ಎ.ಜಿ.ರಾಜು, ಆರ್.ಐ.ಪ್ರತಾಪ್, ವಿ.ಎ.ಆನಂದ್, ಸಂಜಯ್, ಗ್ರಾಮಸ್ಥರಾದ ನಿವೃತ್ತ ಶಿಕ್ಷಕ ಚನ್ನಪ್ಪ, ಶ್ರೀಕಂಠಪ್ಪ, ಜೆ.ಪಿ.ಸಿದ್ದರಾಜು, ರವಿಕುಮಾರ್, ದಾಡಿ ಶಿವಣ್ಣ, ನಾಗರಾಜು, ಚಿಕ್ಕಣ್ಣ, ತಿಮ್ಮಹನುಮಂತರಾಯಪ್ಪ, ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.