ಖಾನಾಪುರ: ಭತ್ತದ ನಾಟಿಗೆ ಸಿದ್ದತೆ ಮಾಡುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತನೋರ್ವ ಮೃತಪಟ್ಟ ಘಟನೆ ಖಾನಾಪುರ ತಾಲ್ಲೂಕಿನ ತಿವೋಲಿ ಎಂಬ ಗ್ರಾಮದಲ್ಲಿ ಸಂಭವಿಸಿದೆ.
ಪಾಂಡುರಂಗ ಸದೋಬಾ ಲಾಡಗಾಂವ್ಕರ್ (ನಿವೃತ್ತ ಶಿಕ್ಷಕ) ಮೃತ ದುರ್ದೈವಿಯಾಗಿದ್ದು ಅವರ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಸ್ಥಳಕ್ಕಾಗಮಿಸಿದ ಮಾಜಿ ಶಾಸಕಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಹಾಗೂ ಖಾನಾಪುರ ಪೊಲೀಸರು ಒಳಗೊಂಡು ಪಾರ್ಥಿವ ಶರೀರವನ್ನು ತಿವೋಲಿವಾಡಕ್ಕೆ ತರಲಾಗಿದ್ದು, ವೈದ್ಯಕೀಯ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆಗಾಗಿ ಆಂಬ್ಯುಲೆನ್ಸ್ ನಲ್ಲಿ ಕಳುಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


