nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರಭಕ್ಷಕ ಹುಲಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ತೀವ್ರ ಆಕ್ರೋಶ
    ಜಿಲ್ಲಾ ಸುದ್ದಿ October 27, 2025

    ನರಭಕ್ಷಕ ಹುಲಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ತೀವ್ರ ಆಕ್ರೋಶ

    By adminOctober 27, 2025No Comments2 Mins Read
    tiger

    ವರದಿ: ಹಾದನೂರು ಚಂದ್ರ

    ಸರಗೂರು:   ತಾಲೂಕಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವರ ಮೇಲೆ ಹುಲಿ ದಾಳಿ ನಡೆಸಿ, ಪ್ರಾಣ ಬಲಿ ಪಡೆದಿದೆ. ಬಡಗಲಪುರ ಗ್ರಾಮದಲ್ಲಿ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತನ ಮೇಲೆ ನರಭಕ್ಷಕ ಹುಲಿ ದಾಳಿ ನಡೆಸಿರುವ ಘಟನೆ ಮುಳ್ಳೂರು(ಬೆಣ್ಣೇಗೆರೆ) ಗ್ರಾಮದಲ್ಲಿ ಭಾನುವಾರ ನಡೆದಿದೆ.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಂಚಿನ ನುಗು ವನ್ಯಜೀವಿ ವಲಯ ಅರಣ್ಯದಂಚಿನ ಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣ್ಣೇಗೆರೆ ಗ್ರಾಮದ ರಾಜಶೇಖರ್(65) ಹುಲಿ ದಾಳಿಯಿಂದ ಮೃತಪಟ್ಟವರು.

    ಮೃತರಿಗೆ ಒಬ್ಬರು ಪುತ್ರರು, ಪತ್ನಿ ಇದ್ದಾರೆ. ಇವರು ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ನಡೆಸಿ, ಕುತ್ತಿಗೆಗೆ ಬಲವಾಗಿ ಕಚ್ಚಿದೆ. ತಿನ್ನಲು ಯತ್ನಿಸಿ 100 ಮೀ. ದೂರದವರೆಗೂ ಎಳೆದುಕೊಂಡು ಹೋಗಿದೆ. ಆದರೆ, ತಿಂದಿಲ್ಲ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದು, ರಾಜಶೇಖರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ರೈತರ ಆಕ್ರೋಶ: ಹುಲಿ ದಾಳಿಯಿಂದ ರೈತ ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು  ಅರಣ್ಯ ಇಲಾಖೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಮೃತಕುಟುಂಬಕ್ಕೆ 30 ಲಕ್ಷ ರೂ.ಸಹಾಯಧನ ನೀಡಬೇಕೆಂದು ಒತ್ತಾಯಿಸಿದರು.

    ಹುಲಿ ದಾಳಿಯಿಂದ ರೈತ ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಇದ್ದುದರಿಂದ ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆ ಕಚೇರಿ ಬಳಿ ಮೃತದೇಹ ತಂದು ಪ್ರತಿಭಟನೆ ಮಾಡಲು ಮುಂದಾಗುತ್ತೆವೆ ಎಂದು ಎಚ್ಚರಿಸಿದರು.

    ಆಗ ಸ್ಥಳಕ್ಕೆ ಸರಗೂರು ಪೋಲಿಸ್ ಠಾಣೆ ಅದು ಅಧಿಕಾರಿಗಳು ತೆರಳಿ ಹುಲಿ ದಾಳಿ ಮಾಡಿದ ಸ್ಥಳವನ್ನು ಪರಿಶೀಲನೆ ನಡೆಸಿದರು.ನಂತರ ರೈತರು ಹಾಗೂ ಗ್ರಾಮಸ್ಥರನ್ನು ಮನವೊಲಿಸಲು ಅಧಿಕಾರಿಗಳು ಮುಂದಾಗಿದೆ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆಯಿತು.

    ನಂತರ ತಾಲ್ಲೂಕಿನ ಶಾಸಕರಾದ ಅನೀಲ್ ಚಿಕ್ಕಮಾದುರವರು ಹುಲಿ ದಾಳಿಗೆ ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಮಾಡಲು ಮುಂದಾದ ವೇಳೆ  ಅರಣ್ಯಾಧಿಕಾರಿಗಳು ಬರುವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ  ಎಂದು ಸಾರ್ವಜನಿಕರು ಪಟ್ಟು ಹಿಡಿದರು.

    ಹೆಡಿಯಾಲ ಉಪ ವಲಯದ ಕಾಡಂಚಿನ ಭಾಗದಲ್ಲಿ ಹುಲಿ ಚಿರತೆ ಕಾಡು ಪ್ರಾಣಿಗಳಿಂದ ರಕ್ಷಣೆ ಇಲ್ಲದೆ ಪರದಾಡುತ್ತಿದ್ದಾರೆ. ಅದರೆ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಬೇಜವಾಬ್ದಾರಿಯಿಂದ ವರ್ತನೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಶಾಸಕರಿಗೆ ದೂರು ನೀಡಿದರು.

    ಸ್ಥಳದಲ್ಲೇ ಅಡಗಿದ್ದ ಹುಲಿ:

    ವಿಷಯ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಸ್ಥಳದಲ್ಲೇ ಅಡಗಿದ್ದ ಹುಲಿ, ಜನರ ಗದ್ದಲ ಹೆಚ್ಚಾಗುತ್ತಿದ್ದಾಂತೆ ಜನರ ಮಧ್ಯೆ ಘರ್ಜಿಸುತ್ತ ಓಡಿತು. ಹುಲಿ ಕಾಣಿಸಿಕೊಂಡದ್ದರಿಂದ ಜನರು ಭಯಭೀತರಾಗಿ ಓಡಿದರು.

    ಸ್ಥಳಕ್ಕೆ ಬಾರದ ಸಚಿವರು:

    ಹುಲಿ ದಾಳಿಗೆ ರೈತ ಬಲಿಯಾಗಿರುವ ವಿಚಾರ ಸಚಿವ ಈಶ್ವರ್ ಬಿ ಖಂಡ್ರೆ ಅವರಿಗೆ ಗಮನಕ್ಕೆ ತಂದಿದ್ದರೂ ಅವರು ಸ್ಥಳಕ್ಕೆ ಆಗಮಿಸದೆ, ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಸಚಿವರಿಗೆ ರೈತರ ಜೀವಕ್ಕಿಂತ ಇವರ ಅಧಿಕಾರವೇ ಹೆಚ್ಚಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.