nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    By adminFebruary 28, 2026No Comments2 Mins Read

    ತುಮಕೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳು ಕೇವಲ ಮಹಿಳೆಯರು, ಬಡವರ ಜೀವನ ಸುಧಾರಿಸುವ ಕಾರ್ಯಕ್ರಮ ಮಾತ್ರ ಆಗಿಲ್ಲ, ವಿಶೇಷವಾಗಿ ಹಿಂದಿನ ಸರ್ಕಾರದ ಅವಧಿಯಲ್ಲಿ ಹೆಚ್ಚಿದ್ದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ನಿಯಂತ್ರಿಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

    ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

    ರೈತ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಪಂಚ ಗ್ಯಾರಂಟಿಗಳಿಂದಾಗಿ ಸುಧಾರಿಸಿದ್ದು, ಯುವ ಜನರನ್ನು ಭಾವನಾತ್ಮಕವಾಗಿ ಎತ್ತಿಕಟ್ಟುವ ಕೆಲಸವನ್ನು ವಿಪಕ್ಷಗಳು ಬಿಡಬೇಕು. ವಿದ್ಯಾವಂತ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದ್ದು, ಇದಕ್ಕಾಗಿಯೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 56 ಸಾವಿರ ಹುದ್ದೆಗಳ ಭರ್ತಿಗೆ ತೀರ್ಮಾನಿಸಲಾಗಿದೆ ಎಂದರು.

    ಯಾರೇ ಅಧಿಕಾರಕ್ಕೆ ಬಂದರೂ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಾರೆ. ಆದರೆ ಹಸಿದ ಜನರಿಗೆ ಹೊಟ್ಟೆತುಂಬ ಅನ್ನಸಿಗಬೇಕು. ಬಡತನ ನಿರ್ಮೂಲನೆ ಮಾಡಬೇಕು. ಪುರುಷರಿಗಿಂತ ಹೆಚ್ಚು ಶ್ರಮ ಪಡುವ ಮಹಿಳೆಯರಲ್ಲಿ ಆರ್ಥಿಕ ಚೈತನ್ಯ ತುಂಬಬೇಕು, ನಿರುದ್ಯೋಗಿ ಯುವ ಪದವೀಧರರಿಗೆ ಕೆಲಸ ಸಿಗುವವರೆಗೆ ಶಿಷ್ಯವೇತನದ ಮೂಲಕ ನೆರವಾಗಬೇಕೆಂದು ರಾಜ್ಯ ಸರ್ಕಾರ ಜನ ಕಲ್ಯಾಣದ ಪಂಚಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಜಾರಿಗೊಳಿಸಿದೆ ಎಂದರು.

    ಸಾಮಾಜಿಕ ಹಿತಾಸಕ್ತಿಗೆ ವಿರುದ್ಧವಾಗಿರುವ ವಿಪಕ್ಷದವರ ಯಾವುದೇ ಟೀಕೆಗೂ ಜಗ್ಗಲ್ಲ. ಹಾಗೆಯೇ ಯಾವುದೇ ಕಾರಣಕ್ಕೂ ಪಂಚಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಹಿಂದೆ ಸಿದ್ದರಾಮಯ್ಯ ಅವರು ಮೊದಲ ಅವಧಿಯ ಸಿಎಂ ಆಗಿದ್ದ ಅವಧಿಯಲ್ಲಿ ಹಸಿವು ಮುಕ್ತ ಕರ್ನಾಟಕ ಘೋಷಣೆಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದರು. ಅದನ್ನು ರಾಜ್ಯದ ಜನತೆ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಮೆಚ್ಚುಗೆಗೆ ಪಾತ್ರವಾಗಿತ್ತು ಎಂದರು.

    ಪಂಚ ಗ್ಯಾರಂಟಿಗಳ ಜಾರಿ ಪೈಕಿ ತುಮಕೂರು ಜಿಲ್ಲೆಯೊಂದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 6.19 ಲಕ್ಷ ಫಲಾನುಭವಿಗಳಿಗೆ 3,167 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ,  ತನ್ನನ್ನು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿಸಿದ ಎಐಸಿಸಿ ವರಿಷ್ಠರು, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಸಹಕಾರದಿಂದ ಈ ಮಹತ್ವದ ಪಂಚಗ್ಯಾರಂಟಿಗಳ ಘೋಷಣೆ ಸಾಧ್ಯವಾಯಿತು. ಚುನಾವಣೆ ಪ್ರಚಾರದಲ್ಲಿ ಗ್ಯಾರಂಟಿ ಕಾರ್ಡ್ ಕೊಟ್ಟಾಗ ಜನಮೊದಲು ನಗುತ್ತಿದ್ದರು. ಇದು ಚುನಾವಣೆ ಗಿಮಿಕ್ ಎನ್ನುತ್ತಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ನುಡಿದಂತೆ ನಡೆದ ಮೇಲೆ ಬಿಸಾಡಿದ್ದ ಗ್ಯಾರಂಟಿ ಕಾರ್ಡ್‌ಗಳನ್ನು ಎತ್ತಿಡುವ ಕಾರ್ಯ ಮಾಡಿದರು. ಇದು ಗ್ಯಾರಂಟಿ ಸತ್ವ, ಶಕ್ತಿ, ಮಹತ್ವ ಎಂದರಲ್ಲದೇ, ಗ್ಯಾರಂಟಿ ಸಮಾವೇಶವನ್ನು ಅತ್ಯಂತ ವ್ಯವಸ್ಥಿತವಾಗಿ ಡಿಸಿ, ಸಿಇಒ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿಯ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಇನ್ನೂ, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ,  ದಶಕದ ಹಿಂದೆ ದೇಶದಲ್ಲಿ ಗುಜರಾತ್ ಮಾದರಿ ಎನ್ನಲಾಗುತ್ತಿತ್ತು. ಆದರೆ ಗ್ಯಾರಂಟಿಗಳ ಅನುಷ್ಠಾನದ ಮೇಲೆ ಕರ್ನಾಟಕ ಮಾದರಿ ಎನ್ನುತ್ತಾ ಮಹಾರಾಷ್ಟ್ರ, ಬಿಹಾರ, ತೆಲಂಗಾಣ, ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ಈವರೆಗೆ ಗ್ಯಾರಂಟಿ ಯೋಜನೆಗಳ ಮೂಲಕ 1.19 ಲಕ್ಷ ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳಿಗೆ ಸಿಗುವಂತೆ ಮಾಡಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ ಅವರಿಗೆ ಕೃತಜ್ಞತೆ ಸಲ್ಲಿಸುವೆ. ಗ್ಯಾರಂಟಿ ಯೋಜನೆಯ ಸತ್ಯ ಫಲಾನುಭವಿಗಳನ್ನು ಕೈ ಬಿಡುವ ಕೆಲಸ ಸಮರ್ಪಕವಾಗಿ ಆಗಬೇಕು. ಗ್ಯಾರಂಟಿ ಯೋಜನೆ ಪ್ರಚಾರವನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಿ ಎಂದರು.

    ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ಅವರು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ, ತುಮಕೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್‌ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿಲ್ಲಾಧಿಕಾರಿ ಶುಭ ಕಲ್ಯಾಣ, ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ವಿ.ಅಶ್ವಿಜ, ಎಸ್‌ಪಿ ಅಶೋಕ್ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.