ಪಾವಗಡ: ತಾಲೂಕಿನಲ್ಲಿ ಪ್ರಮುಖ ಬೆಳೆಯಾಗಿರುವಂತಹ ಶೇಂಗಾ ಬೆಳೆಗೆ ಸದ್ಯ ಕಾಡಂದಿಗಳ ಕಾಟ ಹೆಚ್ಚಾಗಿ ಬೆಳೆಯನ್ನು ನಾಶ ಮಾಡುತ್ತಿವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಹೇಳಿದ್ದಾರೆ.
ಗುಡ್ಲಹಳ್ಳಿ ಸರ್ವೆ ನಂಬರ್ 105ರಲ್ಲಿ ಪೂಜಾರಪ್ಪ ಅವರು ಶೇಂಗಾ ಬೆಳೆಯನ್ನು ಬೆಳೆದಿದ್ದು ಶುಕ್ರವಾರ ಮತ್ತು ಶನಿವಾರ ರಾತ್ರಿ ಕಾಡಂದಿಗಳು ಹೊಲಕ್ಕೆ ನುಗ್ಗಿ ಬೆಳೆಯನ್ನು ನಾಶ ಮಾಡಿವೆ. ಈ ಬಗ್ಗೆ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದ್ದು, ಅವರು ಇದು ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಿದರೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಮಾಹಿತಿ ನೀಡಿದರೆ 15 ಸಾವಿರದಷ್ಟು ಪರಿಹಾರ ಬರುವುದು ಎಂದು ತಿಳಿಸಿದ್ದಾರೆ. ಈ ಬೆಳೆಗೆ ಲಕ್ಷಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದು ಪರಿಹಾರದ ಮೊತ್ತವನ್ನು 50 ಸಾವಿರದಿಂದ 1 ಲಕ್ಷದವರೆಗೂ ಹೆಚ್ಚಿಸಬೇಕೆಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


