ಬೀದರ್: ಜಿಲ್ಲೆಯ ಔರಾದ ತಾಲೂಕು ಕೇಂದ್ರದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸದೆ ವಂಚಿಸಲಾಗುತ್ತಿದೆ ಎಂದು ಅಹಿಂದ ಸಂಘಟನೆ ದೂರಿದೆ.
ಸಂಘಟನೆ ಯುವ ಘಟಕದ ಅಧ್ಯಕ್ಷ ಲಕ್ಷ್ಮಣ ದೇವಕತೆ ಮಂಗಳವಾರ ಜಿಂಟಿ ಕೃಷಿ ನಿರ್ದೇಶಕರಿಗೆ ದೂರು ನೀಡಿದ್ದಾರೆ ನಮ್ಮ ರೈತರಿಗೆ ನಿಯಂತ್ರಿಸಬೇಕಾದ ಬಿತ್ತನೆ ಬೀಜ ಪಕ್ಕದ ಮಹಾರಾಷ್ಟ್ರ, ತೆಲಂಗಾಣದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಔರಾದ್ ತಾಲ್ಲೂಕಿನ ಬಾವಲಗಾಂವ್ ಸಾವರಗಾಂವ್. ಹೊಕ್ರಾಣಾ. ಭಂಡಾರಕುಮಟಾ ಸೇರಿದಂತೆ ಅನೇಕ ಗ್ರಾಮಗಳ ರೈತರಿಗೆ ಇನ್ನು ಬಿತ್ತನೆ ಬೀಜ ಸಿಕ್ಕಿಲ್ಲ ಅಕ್ರಮವಾಗಿ ಬೀಜ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


