ಚಿಕ್ಕಬಳ್ಳಾಪುರ: ಹಾಲು ಒಕ್ಕೂಟವನ್ನು ವಜಾಗೊಳಿಸಿದ್ದು ಸರಿಯಲ್ಲ. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್ ಆರೋಪಿಸಿದ್ದಾರೆ.
ಚಿಮುಲ್ ಮರು ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಸರ್ಕಾರ ಚಿಕ್ಕಬಳ್ಳಾಪುರ ರೈತರಿಗೆ ಪೆಟ್ಟು ನೀಡಿದೆ ಎಂದರು. ಚುನಾವಣೆಯಲ್ಲಿ ಸೋತಿದ್ದೇನೆ ಆದರೆ ಸತ್ತಿಲ್ಲ, ಟಾರ್ಗೆಟ್ ಮಾಡಿಕೊಂಡು ಏನು ತನಿಖೆ ಮಾಡಿಸುತ್ತಾರೋ ಮಾಡಿಸಲಿ ಎಂದರು.
ಆಕ್ಸಿಜನ್ ದುರಂತ ತನಿಖೆಯಲ್ಲಿ ಯಾರು ಟಾರ್ಗೆಟ್ ಎಂಬುದು ಗೊತ್ತು. ಮುಂದಿನ 6 ತಿಂಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


