ಸರಗೂರು: ಕೂಡಗಿ ಗ್ರಾಮದ ರೈತರೊಬ್ಬರ ಮೇಲೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ ಮಹದೇವಪ್ಪ ತಿಳಿಸಿದರು.
ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ಕೂಡಗಿ ಗ್ರಾಮದ ದೊಡ್ಡನಿಂಗಯ್ಯ ಶುಕ್ರವಾರದಂದು ಹುಲಿ ದಾಳಿಗೆ ಮೃತಪಟ್ಟ ಹಿನ್ನೆಲೆ ಅವರ ಮನೆಗೆ ಶನಿವಾರ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡಿ ಕುಟುಂಬಸ್ಥರಿಗೆ ಸ್ವಾತಂನ ಹೇಳಿದರು. ನಂತರ ಗ್ರಾಮಸ್ಥರು ಮತ್ತು ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು.
ಹುಲಿ ಓಡಾಟದ ಬಗ್ಗೆ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ ಮಾಹಿತಿಯನ್ನು ಸ್ಥಳೀಯ ಶಾಸಕರು ತಿಳಿಸಿದ್ದಾರೆ. ನೊಂದ ಕುಟುಂಬಕ್ಕೆ ಸರ್ಕಾರದ ಸೌಲಭ್ಯ ಯೋಜನೆಯಡಿಯಲ್ಲಿ ಮನೆ ಮತ್ತು ಸೌಲಭ್ಯಗಳನ್ನು ನೀಡಬೇಕು ಎಂದು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಮಾನವ–ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ, ಹಿಂದಿನಿಂದಲೂ ಇದೆ. ಅರಣ್ಯದಂಚಿನ ಗ್ರಾಮದ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಇಂದಿನ ಅಗತ್ಯ ಎಂದು ಹೇಳಿದರು.
ನಂತರ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ತಾಲೂಕಿನಲ್ಲಿ ಮೂರನೆಯ ಘಟನೆ ನಡೆದಿದೆ, ಇದು ನಡೆಯಬಹುದಾಗಿತ್ತು. ಹುಲಿ ದಾಳಿ ನನ್ನ ಗಮನಕ್ಕೆ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರು ಜೊತೆ ಮಾತುಕತೆ ನಡೆಸಿದ್ದೇನೆ. ಆದರೆ ಸ್ಥಳೀಯ ಆರ್ಎಫ್ ಓ ಅಧಿಕಾರಿಗಳು ನಾನು ಬಂದು 12 ಗಂಟೆಯಾದರೂ ಬಂದಿರಲಿಲ್ಲ. ಸಾರ್ವಜನಿಕರು ಹಾಗೂ ರೈತರು ಜೊತೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಅದರ ಜೊತೆಯಲ್ಲಿ ಇವರು ಅಧಿಕಾರಿಗಳು ಜೊತೆ ಹೊಂದಾಣಿಕೆಯಲ್ಲಿ ಇಲ್ಲದೆ ಇತರ ಘಟನೆ ನಡೆದಿದೆ ಎಂದು ಸಚಿವರ ಮುಂದೆ ನೇರವಾಗಿ ಆರೋಪಿಸಿದರಲ್ಲದೇ ಸರಿಯಾದ ರೀತಿಯಲ್ಲಿ ಕೆಲಸ ಮಾಡದ ಎಸಿಎಫ್ ಆರ್ಎಫ್ ಓ ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.
ಹುಲಿ ಕಾಣಿಸಿಕೊಂಡಿರುವ ಬಗ್ಗೆ ಕೂಡಲೇ ಧ್ವನಿವರ್ಧಕ ವ್ಯವಸ್ಥೆ ಜನರಿಗೆ ತಿಳುವಳಿಕೆ ನೀಡಬೇಕಾಗಿತ್ತು. ಅದನ್ನು ಇವರು ಮಾಡಿಲ್ಲ. ಈ ಘಟನೆಯ ಹೊಣೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹೊತ್ತುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್,ಎಸ್ ಪಿ ವಿಷ್ಣುವರ್ಧನ್,ಸಿಓ, ತಹಶೀಲ್ದಾರ್ ಮೋಹನಕುಮಾರಿ, ಮುಖಂಡರು ನರಸಿಂಹಮೂರ್ತಿ, ಸಿದ್ದರಾಜು, ಭಾಗ್ಯಲಕ್ಷ್ಮಿ,ಬೆಟ್ಟಯ್ಯ, ರಾಜಣ್ಣ, ಪ್ರಕಾಶ್ ಗೋವಿಂದರಾಜು, ಇನ್ನೂ ಮುಖಂಡರು ಸೇರಿದಂತೆ ಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


