nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.28 ರಿಂದ ರೈತ ಉತ್ಪಾದಕ ಸಂಸ್ಥೆಗಳ ಮೇಳ–2025
    ತುಮಕೂರು February 26, 2025

    ಫೆ.28 ರಿಂದ ರೈತ ಉತ್ಪಾದಕ ಸಂಸ್ಥೆಗಳ ಮೇಳ–2025

    By adminFebruary 26, 2025No Comments2 Mins Read
    mela

    ತುಮಕೂರು: ಜಲಾನಯನ ಅಭಿವೃದ್ಧಿ ಇಲಾಖೆ, ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ ಹಾಗೂ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟದ ಸಹಯೋಗದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ಬೆಂಗಳೂರಿನ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ರೈತ ಉತ್ಪಾದಕ ಸಂಸ್ಥೆ(ಎಫ್.ಪಿ.ಓ.)ಗಳ ಮೇಳವನ್ನು ಆಯೋಜಿಸಲಾಗಿದೆ.

    ಮೇಳವನ್ನು ಅಂದು ಬೆಳಿಗ್ಗೆ 10:30 ಗಂಟೆಗೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆವಹಿಸಲಿದ್ದಾರೆ.


    Provided by
    Provided by

    ರೈತರನ್ನು ಒಟ್ಟುಗೂಡಿಸಿ ಅವರ ಉತ್ಪಾದನೆ ಹಾಗೂ ಮಾರುಕಟ್ಟೆ ಸಾಮರ್ಥ್ಯವನ್ನು ವೃದ್ಧಿಸಲು ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸುವುದು ಸೂಕ್ತವೆಂದು ಪರಿಗಣಿಸಿ ಮೇಳವನ್ನು ಆಯೋಜಿಸಲಾಗಿದೆ.

    ಮೇಳದಲ್ಲಿ ಭಾರತ ಸರ್ಕಾರವು 2013ರಲ್ಲಿ 1956ರ ಕಂಪನಿ ಕಾಯ್ದೆಗೆ ತಿದ್ದುಪಡಿ ತಂದು ಕಂಪನಿ ಕಾಯ್ದೆಯಡಿ ರೈತ ಉತ್ಪಾದಕರ ಸಂಸ್ಥೆಗಳನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ. ರೈತ ಉತ್ಪಾದಕರ ಸಂಸ್ಥೆಯು ಪ್ರಾಥಮಿಕ ಸಂಸ್ಥೆಯಾಗಿದ್ದು, ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಂಡ ಸದಸ್ಯ ರೈತರಿಗೆ ತಾಂತ್ರಿಕ ಸಲಹೆ, ಸಾಮರ್ಥ್ಯ ಬಲವರ್ಧನೆ, ಉತ್ತಮ ಗುಣಮಟ್ಟದ ಪರಿಕರಗಳನ್ನು ಪೂರೈಸುವುದು, ಬೆಳೆದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮುಖಾಂತರ ನೇರ ಮಾರುಕಟ್ಟೆ ಕಲ್ಪಿಸಿ ರೈತರನ್ನು ಹೆಚ್ಚು ಸಬಲರನ್ನಾಗಿ ಮಾಡುವುದು ಮತ್ತು ರೈತರ ಆರ್ಥಿಕ ಮಟ್ಟವನ್ನು ಬಲಪಡಿಸುವುದು ಮೇಳದ ಉದ್ದೇಶವಾಗಿದೆ.

    ಮೇಳದಲ್ಲಿ ಸರಿಸುಮಾರು 15,000 ರೈತರು, ಉದ್ಯಮಿಗಳು ಹಾಗೂ ಹಿತಾಸಕ್ತರು ಭಾಗವಹಿಸಲಿದ್ದು, ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಸ್ಥಾಪನೆಗೊಂಡಿರುವ 100ಕ್ಕೂ ಹೆಚ್ಚು ಎಫ್.ಪಿ.ಓ.ಗಳು ಮಳಿಗೆಗಳನ್ನು ತೆರೆಯಲಿದ್ದು, ವಿವಿಧ ಸಂಸ್ಥೆಯ ಉತ್ಪನ್ನಗಳ ವಸ್ತು ಪ್ರದರ್ಶನ ಮಾಡಲಿದ್ದಾರೆ.

    ಸುಮಾರು 400-500ಕ್ಕೂ ಹೆಚ್ಚಿನ ಎಫ್.ಪಿ.ಓ.ಗಳ ಸದಸ್ಯರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಳದ ಪ್ರಯೋಜನ ಪಡೆಯಲಿದ್ದು, ಮೇಳದಲ್ಲಿ ವಿವಿಧ ವಿಚಾರಗೋಷ್ಠಿಗಳನ್ನು ನಡೆಸಲಾಗುವುದು.

    ರೈತ ಉತ್ಪಾದಕರ ಸಂಸ್ಥೆಗಳ ಧ್ಯೇಯ, ದೂರದೃಷ್ಟಿ, ಅವಕಾಶಗಳು, ತೊಡಕುಗಳು, ಸಾಮರ್ಥ್ಯ ಬಲವರ್ಧನೆ, ಕಾನೂನು ಅನುಸರಣೆ, ಮಾರಾಟ ಮಾಡುವವರ ಮತ್ತು ಖರೀದಿಸುವವರ ಸಮಾವೇಶ, ಇನ್ನಿತರೆ ವಿಷಯಗಳ ಬಗ್ಗೆ ಚಿಂತನ–ಮಂಥನ ಸಭೆಯೊಂದಿಗೆ ರೈತರು ಹಾಗೂ ಉದ್ಯಮಿಗಳಿಗೆ ಅನುಕೂಲವಾಗುವಂತೆ ಈ ಮೇಳವನ್ನು ಆಯೋಜಿಸಲಾಗಿದೆ.

    ರೈತ ಉತ್ಪಾದಕರ ಕಂಪನಿಗಳ ಸದಸ್ಯರು, ರೈತ ಬಾಂಧವರು, ರೈತೋದ್ಯಮಿಗಳು, ಆಸಕ್ತ ನಾಗರಿಕರು ಈ ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯುವುದರೊಂದಿಗೆ ಮೇಳವನ್ನು ಯಶಸ್ವಿಗೊಳಿಸಬೇಕೆಂದು ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ನಿರ್ದೆಶಕ ಡಾ.ರಾಘವೇಂದ್ರ ಕೆ. ಮಾಸ್ತ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ನಗರದ ಹೊರವಲಯದಲ್ಲಿರುವ ಬೆಳಗುಂಬ ರಸ್ತೆಯ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನಿಲಯವು ಉದ್ಘಾಟನೆಗೆ…

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.