ಕೊರಟಗೆರೆ: ತುಮಕೂರು ಜಿಲ್ಲಾಧಿಕಾರಿ ಮುಂದೆಯೇ ಬಫರ್ ಡ್ಯಾಂ ಕಾಮಗಾರಿಗೆ ಸ್ಥಳೀಯ ರೈತರಿಂದ ವಿರೋಧ ವ್ಯಕ್ತವಾಗಿದೆ.
ಎತ್ತಿನಹೊಳೆ ಯೋಜನೆಯ ಬಫರ್ ಡ್ಯಾಂ ಗುದ್ದಲಿ ಪೂಜೆ ಬಿಡುವುದಿಲ್ಲ ಎಂದು 12 ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಕೊರಟಗೆರೆ ಮತ್ತು ದೊಡ್ಡಬಳ್ಳಾಪುರದ 5 ಸಾವಿರ ಎಕರೆ ಪ್ರದೇಶದಲ್ಲಿ ಬಫರ್ ಡ್ಯಾಂ ನಿರ್ಮಾಣವಾಗಲಿದೆ. ಇದರಿಂದಾಗಿ ಬೈರಗೊಂಡ್ಲು ಸಮೀಪ ಬಫರ್ ಡ್ಯಾಂನಿಂದ ಕೋಳಾಲ ಹೋಬಳಿಯ 12 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಆಗಮಿಸಿದ್ದು, ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಚಿನ್ನಹಳ್ಳಿ ಗ್ರಾಮ ಪಂಚಾಯಿತಿಯ ಬೂಚನಹಳ್ಳಿಯ ಹೆಲಿಪ್ಯಾಡ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೂಚನಹಳ್ಳಿ ಗ್ರಾಮದಲ್ಲಿ ನ.26 ರಂದು ನಡೆಯುವ ಸಮಾವೇಶದ ರೂಪುರೇಖೆ ಪರಿಶೀಲನೆ ನಡೆಸಲಾಗಿದೆ.
ಹೆಲಿಪ್ಯಾಡ್ ಸ್ಥಳ ಪರಿಶೀಲನೆ ವೇಳೆ ತುಮಕೂರು ಜಿಲ್ಲಾಧಿಕಾರಿಗೆ 12 ಗ್ರಾಮಗಳ ನೂರಾರು ರೈತರು ಮನವಿ ಸಲ್ಲಿಸಿದ್ದಾರೆ. ಇನ್ನೂ ತುಮಕೂರು ಜಿಲ್ಲಾಧಿಕಾರಿ ಮತ್ತು ಕೊರಟಗೆರೆ ಅಧಿಕಾರಿಗಳ ತಂಡ ಕಾರ್ಯಕ್ರಮದ ಗುಟ್ಟು ಬಿಟ್ಟುಕೊಟ್ಟಿಲ್ಲ ಎಂದು ತಿಳಿದು ಬಂದಿದೆ.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296