nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಮೊಗದಲ್ಲಿ ಮಂದಹಾಸ: ಭರ್ತಿಯತ್ತ ಸಾಗಿದ ನುಗು ಜಲಾಶಯ
    ರಾಜ್ಯ ಸುದ್ದಿ July 27, 2025

    ರೈತರ ಮೊಗದಲ್ಲಿ ಮಂದಹಾಸ: ಭರ್ತಿಯತ್ತ ಸಾಗಿದ ನುಗು ಜಲಾಶಯ

    By adminJuly 27, 2025No Comments2 Mins Read
    nugu

    ಸರಗೂರು:  ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸರಗೂರು ತಾಲ್ಲೂಕಿನ ನುಗು ಜಲಾಶಯ ಭರ್ತಿಯತ್ತ ಸಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

    ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ 2379. 30 ಅಡಿಗಳನ್ನು ತಲುಪಿದೆ.

    ಕೆಲ ದಿನಗಳ ಹಿಂದೆ ಜಲಾಶಯದಲ್ಲಿ 111ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯಕ್ಕೆ 1654 ಕ್ಯೂಸೆಕ್ಸ್ ನೀರು ಒಳಹರಿವಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಿಂಗಳಿನಲ್ಲಿ ಜಲಾಶಯದಲ್ಲಿ ಈ ಮಟ್ಟದ ನೀರು ಸಂಗ್ರಹವಾಗಿದೆ.

    ನುಗು ಜಲಾಶಯದ ಗರಿಷ್ಟ ಮಟ್ಟ 110 ಅಡಿಗಳಿದ್ದು, ಸದ್ಯ ನೀರಿನ ಮಟ್ಟ 109 ಅಡಿಗಳಷ್ಟಿದೆ ಎಂದು ನುಗು ಜಲಾಶಯದ ಸಹಾಯಕ ಕಾರ್ಯಪಾಲಕ ಅಭಿಯಂತರರು ಉಮೇಶ್ ತಿಳಿಸಿದ್ದಾರೆ.

    5.44 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯ ವ್ಯಾಪ್ತಿಯಲ್ಲಿ ಸುಮಾರು 18.110ಎಕರೆ ಅಚ್ಚುಕಟ್ಟು ಪ್ರದೇಶವಿದೆ. ಸರಗೂರು ತಾಲ್ಲೂಕಿನ 1500 ಎಕರೆ ಪ್ರದೇಶಕ್ಕೆ ನೀರು ಹರಿಸಿದರೆ, ಉಳಿದ ನೀರು ನಂಜನಗೂಡು ತಾಲ್ಲೂಕಿನ ಜನರಿಗೆ ದೊರಕಲಿದೆ. ಮೇಲ್ದಂಡೆ ನಾಲೆ 87 ಕಿ.ಮೀ. ಉದ್ದವಿದ್ದು, ನಂಜನಗೂಡಿನ ನರಸಾಂಬುಧಿ ಕೆರೆಯವರೆಗೆ ಇದೆ. 660 ಕ್ಯೂಸೆಕ್ಸ್ ನೀರು ಬಳಕೆಯಾಗಲಿದೆ.

    ಜಲಾಶಯದ ಸಮೀಪದಲ್ಲೇ 2 ಕಿ.ಮೀ. ದೂರದಲ್ಲಿ ಹಲಸೂರು ಗ್ರಾಮದ ಬಳಿ ಕೆರೆಗೆ ಅಣೆಕಟ್ಟೆ ನಿರ್ಮಿಸಲಾಗಿದೆ. ಬಲದಂಡೆ ನಾಲೆ ಹುಲ್ಲಹಳ್ಳಿವರೆಗೆ 38 ಕಿ.ಮೀ. ದೂರವಿದೆ. 150ಕ್ಯೂಸೆಕ್ಸ್ ನೀರು ಬಳಕೆಯಾಗಲಿದೆ. ಅದೇ ರೀತಿ ಎಡದಂಡೆ ನಾಲೆ ನಂಜನಗೂಡು ತಾಲ್ಲೂಕಿನ ಹರದನಹಳ್ಳಿವರೆಗೆ 33 ಕಿ.ಮೀ. ದೂರವಿದ್ದು, 70 ಕ್ಯೂಸೆಕ್ಸ್ ನೀರು ಇರಲಿದೆ. ಒಟ್ಟು 10 ಕೆರೆಗಳಿಗೆ ನೀರು ಬಳಕೆಯಾಗಲಿದೆ.

    ನುಗು ಜಲಾಶಯದ ಮಟ್ಟ:

    ಎಫ್‌ ಆರ್‌ ಎಲ್: 2380.00 ಅಡಿ

    ಪ್ರಸ್ತುತ ಮಟ್ಟ: 2379.30

    ಒಳಹರಿವು: 1654 ಕ್ಯೂಸೆಕ್ಗಳು

    ಹೊರಹರಿವು: 950 ಕ್ಯೂಸೆಕ್ಗಳು

    ನುಗು ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮೂಡಿದೆ ಎಂದು ರೈತ ಮುಖಂಡ ಮುಳ್ಳೂರು ರವಿಕುಮಾರ್ ತಿಳಿಸಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.