ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಆಲದಕಟ್ಟೆ ರಾಷ್ಟ್ರೀಯ ಹೆದ್ದಾರಿ 150 ಎ ನಲ್ಲಿ ಶನಿವಾರ ಎರಡು ಓಮ್ನಿ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರು ಸೇರಿ ಒಟ್ಟು ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಓಮ್ನಿ ವಾಹನಕ್ಕೆ ಹುಳಿಯಾರು ಮಾರ್ಗವಾಗಿ ಬರುತ್ತಿದ್ದ ಮತ್ತೊಂದು ಓಮ್ನಿ ವಾಹನವು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಓಮ್ನಿ ವಾಹನಗಳ ಚಾಲಕರಾದ ಅದಿಲ್ ಮತ್ತು ಪ್ರಕಾಶ್ ಅವರಿಗೆ ಕಾಲು ಮುರಿದಿದ್ದು, ತೀವ್ರ ಸ್ವರೂಪದ ಗಾಯಗಳಾಗಿವೆ.
ವಾಹನದಲ್ಲಿ ಪ್ರಯಾಣಿಸುತ್ತಿದ್ದ ಐದು ಜನ ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಹೆಚ್ಚಿನ ಚಿಕಿತ್ಸೆ ಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಯಾಳುಗಳನ್ನು ಚಿಕ್ಕನಾಯಕನ ಹಳ್ಳಿ ಆಸ್ಪತ್ರೆಗೆ ರವಾನಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


