ಥಾಣೆ: ಕಾರು ಮತ್ತು ಡಂಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನವಿ ಮುಂಬೈನಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತಪಟ್ಟವರಲ್ಲಿ ಓರ್ವ ಮಹಿಳೆ ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರು ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ವಾಶಿ ಕ್ರೀಕ್ ಸೇತುವೆಯ ಮೇಲೆ ಮುಂಜಾನೆ 4:15 ರ ಸುಮಾರಿಗೆ ಅವರ ಕಾರು ಅಪಘಾತಕ್ಕೀಡಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರು ಡಂಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಆದರೆ, ಅಪಘಾತ ಹೇಗೆ ಸಂಭವಿಸಿತು ಎಂಬುದು ಪೊಲೀಸರಿಗೆ ಇನ್ನೂ ಖಚಿತವಾಗಿಲ್ಲ ಎನ್ನಲಾಗಿದೆ.
ಇಬ್ಬರು ಪುರುಷರು ಮತ್ತು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ, ಪೊಲೀಸರು ಎಫ್‌ಐಆರ್ ದಾಖಲಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296