ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ಕಾರು ಹಾಗೂ ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಓರ್ವ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC