ಹಾಸನ: ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದೆ.
ಬಳ್ಳಾರಿ ನಿವಾಸಿ ಅಂತಿಮ ಬಿಇ ವಿದ್ಯಾರ್ಥಿ ಪ್ರವೀಣ್, ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿ ಕೆ.ಬಿ.ಪಾಳ್ಯ ನಿವಾಸಿ ರಾಜೇಶ್(17), ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ(17), ಮುತ್ತಿಗೆಹೀರಳ್ಳಿ ಗ್ರಾಮದ ನಿವಾಸಿ ಗೋಕುಲ್(17), ಕಬ್ಬಿನಹಳ್ಳಿ ನಿವಾಸಿಗಳಾದ ಕುಮಾರ(25), ಪ್ರವೀಣ(25), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಗವಿ ಗಂಗಾಪುರ ಗ್ರಾಮ ನಿವಾಸಿ ಮಿಥುನ್(23), ಚಿಕ್ಕಮಗಳೂರು ಜಿಲ್ಲೆಯ ಮಾಣೇನಹಳ್ಳಿ ನಿವಾಸಿ ಬಿಇ ವಿದ್ಯಾರ್ಥಿ ಸುರೇಶ್(19), ಹಾಸನ ತಾಲೂಕಿನ ಬಂಟರಹಳ್ಳಿ ಗ್ರಾಮದ ನಿವಾಸಿ ಪ್ರಭಾಕರ್(55) ಮೃತಪಟ್ಟವರಾಗಿದ್ದಾರೆ.
ಹಾಸನದಿಂದ ಹೊಳೆನರಸೀಪುರಕ್ಕೆ ಹೊರಟಿದ್ದ ಟ್ರಕ್, ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಬಳಿಕ ಗಣೇಶ ಮೆರವಣಿಗೆಯತ್ತ ತಿರುಗಿದ್ದು, ಮೆರವಣಿಗೆಯಲ್ಲಿ ಸಂಭ್ರಮದಲ್ಲಿ ಕುಣಿಯುತ್ತಿದ್ದವರ ಮೇಲೆಯೇ ಹರಿದಿದ್ದು, ದುರಂತ ಸಂಭವಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC