ಬೀದರ್: ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಬೀದರ್ ತಾಲ್ಲೂಕಿನ ಖಾಸೆಂಪುರ(ಪಿ) ಗ್ರಾಮದ ಶಿವಕುಮಾರ್ ಚಿತಾನಂದ (26), ರತಿಕಾಂತ ಬಸಗೊಂಡಾ (30), ಸಂತೋಷ ಬಸಗೊಂಡಾ (20), ಹಾಗೂ ಸದಾನಂದ ಬಸಗೊಂಡಾ (21) ಮೃತರು. ಗಂಭೀರ ಗಾಯಗೊಂಡ ದಿಗಂಬರ ಜಗನ್ನಾಥ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ಹಿಂದಿರುಗುವಾಗ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ನಾಲ್ವರಲ್ಲಿ ಮೂರು ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC